ತುಮಕೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಮತ್ತೋರ್ವ ಅಭಿಮಾನಿ ಹೃದಯಾಘಾತದಿಂದ ಮೃತಪಟ್ಟಿದ್ದು, ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದ ಶ್ರೀನಿವಾಸ್ ಎಂಬವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪುನೀತ್ ನಿಧನದ ಸುದ್ದಿ ಕೇಳಿ ಶ್ರೀನಿವಾಸ್ ಬೆಂಗಳೂರಿಗೆ ಬಂದಿದ್ದರು. ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅವರ ಅಂತಿಮ ದರ್ಶನ ಪಡೆದು ಮನೆಗೆ ವಾಪಸ್ ಆಗಿದ್ದರು ಎನ್ನಲಾಗಿದೆ. ಮನೆಗೆ ತಲುಪಿದಾಗ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು.
ಎದೆನೋವಿನಿಂದಾಗಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿ ಭರತ್ ಎಂಬವರು ಆತ್ಮಹತ್ಯೆಗೆ ಶರಣಾದ ಘಟನೆ ಕೂಡ ತುಮಕೂರು ಜಿಲ್ಲೆಯಲ್ಲಿ ನಡೆದಿದ್ದು, ಹೀಗಾಗಿ ಜಿಲ್ಲೆಯಲ್ಲಿ ಇಬ್ಬರು ಪುನೀತ್ ಅಭಿಮಾನಿಗಳು ಸಾವನ್ನಪ್ಪಿದ್ದಾರೆ.