ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿದ ಹಿನ್ನೆಲೆಯಲ್ಲಿ ಇಂದು ಅಭಿಮಾನಿಗಳಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿದ್ದು, ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇಂದು ಬೆಳಗ್ಗೆ 11 ಗಂಟೆಯಿಂದಲೇ ಅನ್ನ ಸಂತರ್ಪಣೆ ಆರಂಭವಾಯಿತು.
ಒಂದು ಬಾರಿಗೆ ಸುಮಾರು 5 ಸಾವಿರ ಜನರು ಊಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. 4 ಸಾವಿರ ಮಾಂಸಾಹಾರಿ ಹಾಗೂ ಒಂದು ಸಾವಿರ ಸಸ್ಯಹಾರಿ ಕೌಂಟರ್ ಗಳನ್ನು ಸಿದ್ಧಪಡಿಸಲಾಗಿದೆ. 2 ಗೇಟ್ ಗಳಲ್ಲಿ 5 ಸಾವಿರ ಕುರ್ಚಿ ಟೇಬಲ್ ಹಾಕಲಾಗಿದೆ.
ಇನ್ನೂ ಅನ್ನ ಸಂತರ್ಪಣೆಗೆ ಸಾಗರ ರೀತಿಯಲ್ಲಿ ಅಪ್ಪು ಫ್ಯಾನ್ಸ್ ಆಗಮಿಸುತ್ತಿದ್ದಾರೆ. ಇನ್ನೊಂದೆಡೆ ದೊಡ್ಡ ಜನ ಸಮೂಹವನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇನ್ನೂ ಅಭಿಮಾನಿಗಳು ಪ್ಯಾಲೇಸ್ ಗ್ರೌಂಡ್ ಗೆ ಸಾಲಾಗಿ ಬರುತ್ತಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡರು. ಬಳಿಕ ಅಪ್ಪು ಅಭಿಮಾನಿಗಳಿಗೆ ಊಟ ಬಡಿಸಿದರು.
ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅನ್ನ ಸಂತರ್ಪಣೆಯಲ್ಲಿ ಭಾಗವಹಿಸುತ್ತಿದ್ದಾರೆ. ‘ದೊಡ್ಮನೆ’ ಎಂಬ ಪದಕ್ಕೆ ಅರ್ಥ ಬರುವಂತೆಯೇ ಇಂದು ಲಕ್ಷಾಂತರ ಜನರು ಯಾವುದೇ ಬೇಧ ಭಾವವಿಲ್ಲದೇ ಜೊತೆಯಾಗಿ ಕುಳಿತು ಅನ್ನಸಂತರ್ಪಣೆಯಲ್ಲಿ ಭಾಗಿಯಾಗುತ್ತಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700