ತುಮಕೂರು: ರಾಜ್ಯದ 80 ತಾಲ್ಲೂಕು ಆಸ್ಪತ್ರೆಗಳಲ್ಲಿ ಆರಂಭಿಸಿರುವ ‘ಪುನೀತ್ ರಾಜ್‌ಕುಮಾರ್’ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರವರು ಹೇಳಿದರು.
ನಗರದ ಶಿರಾರಸ್ತೆಯ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ಸ್ಥಾಪಿಸಿರುವ 2ನೇ ಕ್ಯಾಥ್ ಲ್ಯಾಬ್ ನ್ನು ಫೆ.19 ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಿ ಅವರು ಮಾತನಾಡುತ್ತಾ, ಹೃದಯ ಜ್ಯೋತಿ ಸೌಲಭ್ಯದಿಂದ ಈವರೆಗೆ ಸುಮಾರು 250 ಕ್ಕೂ ಹೆಚ್ಚು ಜನರ ಜೀವ ಕಾಪಾಡಲಾಗಿದೆ ಎಂದು ತಿಳಿಸಿದರು.
ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೆ–ಕೇರ್ ಮತ್ತು ಕಿಮೋಥೊರಫಿ ಸೌಲಭ್ಯ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು ಸದ್ಯದಲ್ಲಿಯೇ ಈ ಯೋಜನೆಗೆ ಚಾಲನೆ ನೀಡಲಾಗುವುದು. ಸರ್ಕಾರ ಮತ್ತು ಖಾಸಗಿ ಸಂಸ್ಥೆಗಳು ಜೊತೆಗೂಡಿ ಜನರಿಗೆ ಗುಣಮಟ್ಟದ ವೈದ್ಯಕೀಯ ಸೌಲಭ್ಯ ಒದಗಿಸಬೇಕಾಗಿದೆ. ಈ ನಿಟ್ಟಿನಲ್ಲಿ ತುಮಕೂರಿನ ಶ್ರೀದೇವಿ ಆಸ್ಪತ್ರೆ ಮತ್ತು ಸಿದ್ದಾರ್ಥ ವೈದ್ಯಕೀಯ ಸಂಸ್ಥೆಗಳಿಗೆ ಡೆ-ಕೇರ್ ಮತ್ತು ಕಿಮೋಥೆರಫಿ ಚಿಕಿತ್ಸಾ ನಿರ್ವಹಣೆಯನ್ನು ವಹಿಸಿಕೊಂಡುವುದಾಗಿ ಸಚಿವರು ಪ್ರಕಟಿಸಿದರು.
ವೈದ್ಯಕೀಯ ಲೋಕದಲ್ಲಿ ಪ್ರತಿನಿತ್ಯ ಹೊಸ–ಹೊಸ ಬದಲಾವಣೆಗಳಾಗುತ್ತವೆ. ಮುಂದಿನ ದಿನಗಳಲ್ಲ್ಲಿ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗಳಿಗೂ ಪರಿಹಾರ ದೊರಕಲಿದೆ. ಭವಿಷ್ಯದಲ್ಲಿ ಮನುಷ್ಯನ ಆಯಸ್ಸು 120 ವರ್ಷದವರೆಗೂ ಹೋದರೂ ಅಚ್ಚರಿಪಡಬೇಕಿಲ್ಲ ಎಂದು ಅವರು ನುಡಿದರು.
ರೋಗಗಳಿಂದಾಗಿ ಮನುಷ್ಯನ ಜೀವ ಅಪಾಯಕ್ಕೆ ಸಿಲುಕಿದ ಸಂದರ್ಭದಲ್ಲಿ ವೈದ್ಯರಿಗೆ ಮತ್ತು ದಾದಿಯರಿಗೆ ಜೀವ ಉಳಿಸುವಂತಹ ಶಕ್ತಿಯಿರುತ್ತದೆ. ದೇವರಿಗೆ ಬಿಟ್ಟರೇ ಇತಂಹ ಅದ್ಭುತ ಶಕ್ತಿಯಿರುವುದು ವೈದ್ಯಕೀಯ ಸಮುದಾಯಕ್ಕೆ ಮಾತ್ರ. ಹೀಗಾಗಿ ವೈದ್ಯರು ವೃತ್ತಿ ಧರ್ಮ ಕಾಪಾಡಬೇಕು ಎಂದರು. ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸುತ್ತಿರುವ ತುಮಕೂರಿನ ಶ್ರೀದೇವಿ ಆಸ್ಪತ್ರೆ ರಾಜ್ಯದ ದೊಡ್ಡ ಆಸ್ತಿಯಾಗಿದ್ದು, ಈ ಭಾಗದಲ್ಲಿ ಒಳ್ಳೆಯ ಹೆಸರು ಗಳಿಸಿ ಜನಮೆಚ್ಚುಗೆಗೆ ಪಾತ್ರವಾಗಿದೆ ಎಂದರು. ಭವಿಷ್ಯದಲ್ಲಿ ಉಜ್ವಲ ಉಜ್ವಲ ಸಂಸ್ಥೆಯಾಗಿ ಬೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕರಾದ ಡಾ.ಎಂ.ಆರ್. ಮಾತನಾಡುತ್ತಾ, ದಿನೇಶ್ ಗುಂಡೂರಾವ್ ಅವರ ಪಾತ್ರ ಬಹಳ ಮುಖ್ಯವಾಗಿತ್ತು. ಸರ್ಕಾರಿ ಆಸ್ಪತ್ರೆಗಳ ಸೇವೆಯ ಬಗ್ಗೆ ಜನರಲ್ಲಿ ನಂಬಿಕೆ, ವಿಶ್ವಾಸ ಹೆಚ್ಚಾಗುವಂತೆ ಮಾಡಿದ್ದಾರೆ. ಅನ್ನಭಾಗ್ಯ ಮತ್ತು ಯಶಸ್ವಿನಿ ಯೋಜನೆ ಜಾರಿಗೊಳಿಸುವಲ್ಲಿ ಸಚಿವರ ಪಾತ್ರ ಬಹಳ ಮುಖ್ಯವಾಗಿತ್ತು. ಈಗಿನ ಕಾಲಘಟ್ಟ ಮತ್ತು ಸನ್ನಿವೇಶಕ್ಕೆ ತಕ್ಕಂತೆ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಲ್ಲಿ ಕೆಲವು ಮಾರ್ಪಾಡು ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು. 2ನೇ ಕ್ಯಾಥ್ ಲ್ಯಾಬ್ ಆರಂಭದಿಂದ ಈ ಭಾಗದ ಜನರಿಗೆ ಇನ್ನೂ ಹೆಚ್ಚಿನ ಆರೋಗ್ಯ ಸೇವೆ ಒದಗಿಸಲು ಸಹಕಾರಿಯಾಗಲಿದೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಡಾ.ಕೆ.ಆರ್.ಕಮಲೇಶ್ ಮಾತನಾಡುತ್ತಾ, ದಿವಂಗತ ಮಾಜಿ ಮುಖ್ಯಮುಂತ್ರಿ ಆರ್.ಗುಂಡೂರಾವ್ ಮರೆಯಲಾಗದ ಸಮಾಜಮುಖಿ– ಜನಹಿತ ಕಾರ್ಯಗಳನ್ನು ಮಾಡಿದ್ದು, ಮುಂದಿನ ಪೀಳಿಗೆಗೆ ಇದನ್ನು ಮನವರಿಕೆ ಮಾಡಿಕೊಡುವ ಕೆಲಸ ಮುಖ್ಯವಾಗಿ ಆಗಬೇಕಿದೆ ಎಂದು ಒತ್ತಿ ಹೇಳಿದರು.
ಇದೇ ಸಂದರ್ಭದಲ್ಲಿ ಎಂ.ನಾಗರಾಜ್ ಜೀವನ ಚರಿತ್ರೆ ಕುರಿತು ಡಾ ಕೆ.ಆರ್. ಕಮಲೇಶ್ ಕನ್ನಡದಲ್ಲಿ ಬರೆದಿದ್ದ “‘A Beacon of Light Dedicated to Srevice – Acharya Dr. M. Nagaraju`s Life Mission’ ಕೃತಿಯನ್ನು ಡಿ.ಆರ್.ಡಿಸೋಜಾ ಇಂಗ್ಲೀಷ್‌ಗೆ ಅನುವಾದ ಮಾಡಿದ್ದು, ಇದನ್ನು ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ ಲೋಕಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಚಿಕ್ಕನಾಯಕನಹಳ್ಳಿ ಶಾಸಕರಾದ ಸುರೇಶ್‌ಬಾಬು, ಜಪಾನಿನ ಸಿಮಾಂಜೋ ಕಂಪನಿಯ ಭಾರತೀಯ ವ್ಯಾಪಾರ ಅಭಿವೃದ್ಧಿಯ ವ್ಯವಸ್ಥಾಪಕರಾದ ಉಯಾಮಾ ಡೈಕಿ ಮತ್ತು ಭಾರತೀಯ ಗವರ್ನಲ್ ಮ್ಯಾನೇಜರ್ (ಸೇಲ್ಸ್) ರಾಜೀವ್ ಝಾ, ಶ್ರೀದೇವಿ ವೈದ್ಯಕೀಯ ನಿರ್ದೇಶಕ ಡಾ.ರಮಣ್ ಎಂ ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಎಂ.ಎಸ್.ಪಾಟೀಲ್, ಶ್ರೀದೇವಿ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಲ್.ಹರೇಂದ್ರಕುಮಾರ್, ಶ್ರೀದೇವಿ ಆಸ್ಪತ್ರೆ ಹೃದಯ ರೋಗ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಸುರೇಶ್.ಎಸ್. ಹಾಗೂ ಡಿ.ಹೆಚ್.ಓ, ಡಾ.ಚಂದ್ರಶೇಖರ್, ಜಿಲ್ಲಾ ಸರ್ಜನ್ ಡಾ.ಅಜ್ಗರ್‌ಬೇಗ್, ಶ್ರೀದೇವಿ ಆಸ್ಪತ್ರೆಯ ನೇತ್ರ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರಾದ ಡಾ.ಪಿ.ಲಾವಣ್ಯ, ಶ್ರೀದೇವಿ ಚಾರಿಟಬಲ್ ಟ್ರಸ್ಟ್ ಟ್ರಸ್ಟಿಯಾದ ಅಂಬಿಕಾ ಎಂ ಹುಲಿನಾಯ್ಕರ್, ಉಪಪ್ರಾಂಶುಪಾಲರಾದ ಡಾ.ರೇಖಾಗುರುಮೂರ್ತಿ, ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಅಧೀಕ್ಷಕರಾದ ಡಾ.ಕೆ.ಮೋಹನ್‌ಕುಮಾರ್, ಶ್ರೀದೇವಿ ವೈದ್ಯಕೀಯ ಆಡಳಿತ ವಿಭಾಗದ ಉಪಪ್ರಾಂಶುಪಾಲರಾದ ಡಾ.ಎಂ.ಎನ್.ಹೇಮಂತ್‌ರಾಜ್, ಶ್ರೀದೇವಿ ಆಸ್ಪತ್ರೆಯ ಸಿ.ಎ.ಓ ಡಾ.ಪ್ರದೀಪ್ ಕುಮಾರ್ ವೆಗ್ಗಿ, ಶ್ರೀದೇವಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ನರೇಂದ್ರವಿಶ್ವನಾಥ್, ಪ್ರಜಾಪ್ರಗತಿ ಸಂಪಾದಕರಾದ ಎಸ್.ನಾಗಣ್ಣ ಮುಂತಾದವರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4