nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪ್ಪುನ ಹುಡ್ಕೊಂಡು ಹೋಗ್ತೀನಿ ಎಂದ ರಾಘಣ್ಣ.. ಕಣ್ಣೀರು ಹಾಕಿದ ಶಿವಣ್ಣ!
    ರಾಜ್ಯ ಸುದ್ದಿ March 15, 2022

    ಅಪ್ಪುನ ಹುಡ್ಕೊಂಡು ಹೋಗ್ತೀನಿ ಎಂದ ರಾಘಣ್ಣ.. ಕಣ್ಣೀರು ಹಾಕಿದ ಶಿವಣ್ಣ!

    By adminMarch 15, 2022No Comments3 Mins Read
    shiva rajkumar

    ಮಾರ್ಚ್‌ 17ರಂದು ಪುನೀತ್‌ ರಾಜ್‌ಕುಮಾರ್‌ ಅವರ ಜನ್ಮದಿನ. ಹಾಗಾಗಿ ಅದೇ ದಿನ ಜೇಮ್ಸ್‌ ಚಿತ್ರ ಬಿಡುಗಡೆ ಮಾಡಲು ಈಗಾಗಲೇ ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ. ರಾಜಕುಮಾರನಿಗಾಗಿ ಥಿಯೇಟರ್‌ಗಳು ಕೂಡ ಸಿಂಗಾರಗೊಳ್ಳುತ್ತಿವೆ. ರಾಜ್ಯವಷ್ಟೇ ಅಲ್ಲದೆ, ಹೊರ ರಾಜ್ಯ, ವಿದೇಶದಲ್ಲೂ ಜೇಮ್ಸ್‌ ಬರುವಿಕೆಗಾಗಿ ಅಭಿಮಾನಿಗಳು ಕಾದು ಕುಳಿತಿದ್ದಾರೆ. 46 ವರ್ಷಗಳ ಕಾಲ ಆ ಬೆಟ್ಟದ ಹೂವು ಭೂಮಿ ಮೇಲೆ ನೆಲೆ ನಿಂತು ಎಲ್ಲರನ್ನೂ ನಕ್ಕು ನಗಿಸಿ ಕೈಗೆಟುಕದ ನಕ್ಷತ್ರದಂತೆ ನಮ್ಮಿಂದ ದೂರವಾಗಿದೆ. ಮಾರ್ಚ್‌ 17 ರಂದು ನಮಗೆ ದರ್ಶನ ನೀಡಲು ಅವ್ರು ಬರುತ್ತಿದ್ದಾರೆ. ಅವರಿಗಾಗಿ ಭಾನುವಾರ ಒಂದು ವಿಶೇಷ ಕಾರ್ಯಕ್ರಮ ನಡೆದಿದೆ. ಯಾರವರು ಅನ್ನೋದು ನಿಮಗೆ ಈಗಾಗಲೇ ಗೊತ್ತಾಗಿದೆ. ಅವರನ್ನು ನೆನೆದ ದೊಡ್ಮನೆ ಕುಟುಂಬದವರು ಭಾವುಕರಾಗಿದ್ರು. ಅಷ್ಟೇ ಅಲ್ಲ, ಅಲ್ಲಿ ನೆರೆದಿದ್ದ ಪ್ರತಿಯೊಬ್ಬರೂ ಕಣ್ಣೀರು ಸುರಿಸಿದ್ದಾರೆ.

    ಹೌದು, ಜೇಮ್ಸ್‌ ಸಿನಿಮಾ(James Movie) ಇದೀಗ ಕರುನಾಡಿನ ಜನರ ಆಸ್ತಿಯಾಗಿದೆ. ಆ ಸಿನಿಮಾ ರಿಲೀಸ್‌ ಕ್ಷಣಕ್ಕಾಗಿ ಇಡೀ ದೇಶವಷ್ಟೇ ಅಲ್ಲ ಹೊರ ದೇಶಗಳ ಜನರೂ ಕಾದು ಕುಳಿತ್ತಿದ್ದಾರೆ. ಇದು ಅಪ್ಪು ಮೇಲೆ ಅಭಿಮಾನಿಗಳಿಗೆ ಇರುವ ಪ್ರೀತಿ ಎಂಥದ್ದು ಅನ್ನೋದನ್ನು ತೋರಿಸುತ್ತೆ. ಇದೀಗ ಎಲ್ಲೆಡೆ ಅಪ್ಪು ಅಪ್ಪು ಅನ್ನೋ ಹೆಸರು ಬಿಟ್ಟರೆ ಇನ್ನೇನೂ ಕೇಳುತ್ತಿಲ್ಲ. ಭಾನುವಾರ ಬೆಂಗಳೂರಿನಲ್ಲಿ ಅಪ್ಪು ಕೊನೆಯ ಸಿನಿಮಾ ಜೇಮ್ಸ್‌ ಪ್ರೀ ರಿಲೀಸ್ ಈವೆಂಟ್‌ ತುಂಬಾ ಅದ್ಧೂರಿಯಾಗಿ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಅಪ್ಪು ನೆನೆದು ಭಾವುಕರಾಗಿದ್ದಂತೂ ಸುಳ್ಳಲ್ಲ.ಬೆಟ್ಟದ ಹೂವನ್ನು ಕಳೆದುಕೊಂಡ ಜನರು ದೇವರಿಗೆ ಹಿಡಿಶಾಪ ಹಾಕಿದ್ರು. ಬರೀ ಕಣ್ಣೀರು – ಪುನೀತ್‌(Puneeth Rajkumar)ಮಯವಾಗಿದ್ದ ಕಾರ್ಯಕ್ರಮದಲ್ಲಿ ವೇದಿಕೆ ಏರಿ ಮಾತನಾಡಿದವರೆಲ್ಲರೂ ಅಪ್ಪು ನೆನೆದು ಭಾವುಕರಾಗಿದ್ರು. ಅದರಲ್ಲಿಯೂ ರಾಘವೇಂದ್ರ ರಾಜ್‌ಕುಮಾರ್ ಹಾಗೂ ಶಿವರಾಜ್ ಕುಮಾರ್ ಆಡಿದ ಮಾತುಗಳು ದೊಡ್ಮನೆ ಕುಟುಂಬದ ಅಭಿಮಾನಿಗಳಿಗೆ ದುಃಖ ಉಮ್ಮಳಿಸುವಂತೆ ಮಾಡಿದವು.


    Provided by
    Provided by

    ದುಃಖದಿಂದಲೇ ಮಾತನಾಡಿದ ರಾಘವೇಂದ್ರ ರಾಜ್‌ಕುಮಾರ್‌(Raghavendra Rajkumar), ನಾನು ನನ್ನ ತಮ್ಮನನ್ನು ಹುಡುಕಿಕೊಂಡು ಹೋಗುತ್ತೇನೆ ಎಂದುಬಿಟ್ಟರು. ಇದನ್ನು ಕೇಳಿ ಶಿವಣ್ಣ ತುಂಬಾ ದುಃಖಿತರಾದರು. ಶಿವಣ್ಣ ಮಾತನಾಡುವ ಸರದಿ ಬಂದಾಗ ಅವರ ಬಾಯಿಂದ ಒಂದು ಮಾತು ಕೂಡ ಬರಲಿಲ್ಲ. ತೀವ್ರ ಭಾವೋದ್ವೇಗಕ್ಕೆ ಒಳಗಾದ ಅವರು, ರಾಘವೇಂದ್ರ ರಾಜ್‌ಕುಮಾರ್ ಅವರನ್ನು ತಬ್ಬಿಕೊಂಡು ಅತ್ತುಬಿಟ್ಟರು.

    ನಂತರ ಮಾತನಾಡಿದ ಶಿವಣ್ಣ(Shivarajkumar), ‘ಜೇಮ್ಸ್’ ಸಿನಿಮಾದ ನಟರಿಗೆ, ತಂತ್ರಜ್ಞರಿಗೆ ವಂದಿಸಿ, ಅಭಿನಂದಿಸಿದರು. ‘ರಾಘು ಮಾತನಾಡಿದ್ದು ನೋವು ತರಿಸಿತು. ಇವರಿಬ್ಬರೂ ನನಗಿಂತ ಚಿಕ್ಕವರು. ನಾನು ಹೇಗೆ ಇದನ್ನೆಲ್ಲಾ ನೋಡುತ್ತಾ ಇರಬೇಕು? ಅನ್ನೋ ಪ್ರಶ್ನೆ ಅಲ್ಲಿ ನೆರೆದಿದ್ದವರ ದುಃಖವನ್ನೂ ಇಮ್ಮಡಿಯಾಗಿಸಿತು. ಹೊರಗಿನಿಂದ ನೋಡುವುದಕ್ಕೆ ಚೆನ್ನಾಗಿಯೇ ಇರುತ್ತೇವೆ. ಶೂಟಿಂಗ್‌ನಲ್ಲಿ ಭಾಗವಹಿಸುತ್ತೇವೆ, ಹಾಡುತ್ತೇವೆ, ಕುಣಿಯುತ್ತೇವೆ, ಡಬ್ಬಿಂಗ್ ಮಾಡುತ್ತೇವೆ. ಆದರೆ ಆ ನೋವು ಒಳಗಡೆಯೇ ಇದೆ. ಪುನೀತ್‌ ಅಕಾಲಿಕವಾಗಿ ನಮ್ಮನ್ನು ಬಿಟ್ಟು ಹೋದ. ರಾಘು ಆರೋಗ್ಯ ಹೀಗೆ ಆಯಿತು. ಇವರು ನನಗಿಂತಲೂ ಸಣ್ಣವರು. ಇವರನ್ನು ಹೀಗೆಲ್ಲಾ ನೋಡುವುದು ನನಗೆ ಹೇಗೆ ತಾನೆ ಸಾಧ್ಯ?” ಎಂದು ಮತ್ತೆ ಭಾವುಕರಾದರು ಶಿವಣ್ಣ.

    ನಾವು ಐದು ಜನ ಸಹೋದರ-ಸಹೋದರಿಯರು ಒಟ್ಟಿಗೆ ಇದ್ದೆವು. ಈಗ ನಮ್ಮ ಜೊತೆ ಒಬ್ಬ ಇಲ್ಲ. ಅದರಲ್ಲೂ ಚಿಕ್ಕವನಾಗಿದ್ದ ಅಪ್ಪು ಹೋಗಿದ್ದು ಎಂದೂ ಮಾಯದ ನೋವು. ಅಪ್ಪು ಎಲ್ಲರ ಮುದ್ದಿನ ಮಗನಾಗಿದ್ದ. ಎಲ್ಲರಿಗೂ ಅವನೆಂದರೆ ಅಚ್ಚುಮೆಚ್ಚು. ಅವನ ಅಗಲಿಕೆ ಯಾರಿಗೂ ಅರಗಿಸಿಕೊಳ್ಳಲು ಆಗಿಲ್ಲ. ಅಪ್ಪ-ಅಮ್ಮ ನಮ್ಮ ಜೊತೆ ನೂರಾರು ವರ್ಷ ಇರ್ತಾರೆ ಅಂದುಕೊಂಡಿದ್ದೆ. ಅವರು ಹೋಗಿಬಿಟ್ಟರು. ಆ ದುಃಖದಿಂದ ಚೇತರಿಸಿಕೊಳ್ಳುವ ಹೊತ್ತಿಗೆ ಅಪ್ಪು ಹೋಗಿಬಿಟ್ಟ ಅಂದ್ರು ಶಿವಣ್ಣ.

    ಜೇಮ್ಸ್’ ಸಿನಿಮಾಕ್ಕೆ ಡಬ್ಬಿಂಗ್‌ ಮಾಡಿದ ಬಗ್ಗೆ ಮಾತನಾಡಿದ ಶಿವಣ್ಣ, ”ಜೇಮ್ಸ್’ ಸಿನಿಮಾ(James)ಕ್ಕೆ ಡಬ್ಬಿಂಗ್ ಮಾಡಲು ಬಹಳ ಕಷ್ಟವಾಯಿತು. ಯಾವ ನಟನಿಗೂ ಇನ್ನೊಬ್ಬ ವ್ಯಕ್ತಿ ಧ್ವನಿ ನೀಡಲಾಗದು. ಅದರಲ್ಲೂ ಇಂತಹ ಸನ್ನಿವೇಶದಲ್ಲಿ ಧ್ವನಿ ನೀಡುವುದು, ಅದೂ ಸ್ವಂತ ತಮ್ಮನಿಗೆ ಧ್ವನಿ ನೀಡುವುದು ಬಹಳ ನೋವಿನ ಸಂಗತಿ. ಆದರೂ ಡಬ್ಬಿಂಗ್ ಮಾಡಿದ್ದೇನೆ. ”ಇಬ್ಬರೂ ಸೇರಿ ಒಟ್ಟಿಗೆ ಸಿನಿಮಾ ಮಾಡಬೇಕು ಎಂಬುದು ನಮ್ಮ ಬಹು ವರ್ಷಗಳ ಕನಸಾಗಿತ್ತು. ಕಳೆದ ಕೆಲ ವರ್ಷಗಳಿಂದ ಕತೆಗಳನ್ನು ಕೇಳುತ್ತಲೇ ಇದ್ದೆವು. ಆದರೆ ಅದು ಸಾಧ್ಯವೇ ಆಗಲಿಲ್ಲ. ಆದರೆ ಒಬ್ಬ ತೆಲುಗು ನಿರ್ದೇಶಕರು ಬಂದು ಕತೆ ಹೇಳಿದ್ದಾರೆ.

    ಆ ಸಿನಿಮಾದಲ್ಲಿ ನನ್ನನ್ನು ಅಪ್ಪುವನ್ನು ನೀವು ಒಟ್ಟಿಗೆ ನೋಡುತ್ತೀರಾ. ಆ ಸಿನಿಮಾ ನನ್ನ ಕಡೆಯಿಂದ ಅಪ್ಪುಗೆ ಡೆಡಿಕೇಶನ್ ಆಗಿರುತ್ತದೆ” ಎಂದರು ಶಿವರಾಜ್ ಕುಮಾರ್. ಇನ್ನು ‘ಜೇಮ್ಸ್’ ಸಿನಿಮಾದ ಬಿಡುಗಡೆ ದಿನ ನಾನು ಮೈಸೂರಿನಲ್ಲಿರುತ್ತೇನೆ. ಅಲ್ಲಿಯೇ ಸಿನಿಮಾ ನೋಡುತ್ತೇನೆ” ಎಂದರು. ಅಲ್ಲದೆ ಸಿನಿಮಾದ 25ನೇ ದಿನಕ್ಕೆ ಹೊಸಪೇಟೆಗೆ ಹೋಗಿ ಅಲ್ಲಿ ಕಾರ್ಯಕ್ರಮ ಮಾಡುವುದಾಗಿಯೂ ಶಿವಣ್ಣ ಭರವಸೆ ನೀಡಿದರು.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    Leave A Reply Cancel Reply

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.