ಚಿತ್ರದುರ್ಗ: ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸ್ಮರಣಾರ್ಥ ಅಂಗವಾಗಿ ಅಕ್ಟೋಬರ್ 29 ರಿಂದ ನಾಲ್ಕು ದಿನಗಳವರೆಗೆ ಜೆಜೆ ಹಟ್ಟಿ ಬಳಗದ ವತಿಯಿಂದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗಿದೆ.
ಈ ತಂಡದಲ್ಲಿ ಸುಮಾರು 20 ತಂಡಗಳು ಭಾಗವಹಿಸಲಿದ್ದು, ಎಲ್ಲ ತಂಡದ ಆಟಗಾರರಿಗೆ ಪುನೀತ್ ರಾಜಕುಮಾರ್ ಭಾವಚಿತ್ರ ಇರುವ ಟೀ ಶರ್ಟ್ ಅನ್ನು ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ನೀಡಲಾಯಿತು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಜಿ.ಎಸ್.ಅನಿತ್ ಕುಮಾರ್ ಹಾಗೂ ನಗರಸಭೆ ಸದಸ್ಯರಾದ ಸೈಯದ್ ನಸ್ರುಲ್ಲಾ ಹಾಗೂ ಜೈಲುದ್ದೀನ್ ತಂಡದ ಆಟಗಾರರಾದ ಸ್ವಾಮಿ, ರಂಗಸ್ವಾಮಿ, ಮಲ್ಲಿಕಾರ್ಜುನ್, ರೋಹಿತ್ ಶಶಿ, ಸುಪ್ರೀತ್ ನೆಲ್ಸನ್ ಮಂಡೇಲಾ, ಹೊಯ್ಸಳ ಮತ್ತು ಎಲ್ಲ ತಂಡದ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ಮುರುಳಿಧರನ್ ಆರ್., ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz