ತಿಪಟೂರು: ತಾಲ್ಲೂಕು ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ ತಿಪಟೂರಿನ ಶ್ರೀ ಸತ್ಯಗಣಪತಿ ಪೆಂಡಾಲ್ ಮುಂಭಾಗದಲ್ಲಿರುವ ಅರಳೀಕಟ್ಟೆ ವೃತ್ತವನ್ನು ಪುನೀತ್ ರಾಜ್ ಕುಮಾರ್ ವೃತ್ತವೆಂದು ಹಾಗೂ ಕೆ.ಆರ್.ಬಡಾವಣೆಯ ನಾಲ್ಕನೇ ಮುಖ್ಯರಸ್ತೆಯಲ್ಲಿ ವಾಸ ಇರುವ ಡಾ.ರಾಜ್ ಕುಮಾರ್ ಬಾಲ್ಯ ಸ್ನೇಹಿತರಾದ ಶ್ರೀರಾಮಸ್ವಾಮಿಯವರ ರಸ್ತೆಯನ್ನು ಯುವರತ್ನ, ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡುವಂತೆ ನಗರಸಭೆ ಪೌರಾಯುಕ್ತರಾದ ಉಮಾಕಾಂತ್ ರವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಿ.ಟಿ.ಕುಮಾರ್, ನಗರಸಭಾ ಸದಸ್ಯ ಮಹೇಶ್, ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಬಿ.ಬಿ.ಬಸವರಾಜ್ ಮಾತನಾಡಿ, ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಮಾಡಿದರು.
ಮನವಿ ಪತ್ರ ಸ್ವೀಕರಿಸಿ ಮಾತನಾಡಿದ ನಗರಸಭೆ ಆಯುಕ್ತರಾದ ಉಮಾಕಾಂತ್, ಮುಂದಿನ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಚರ್ಚಿಸಿ, ಸೂಕ್ತ ನಿರ್ಣಯವನ್ನು ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಬೆನ್ನಾಯಕನಹಳ್ಳಿ ಗ್ರಾ.ಪಂ. ಸದಸ್ಯ ನರಸಿಂಹಯ್ಯ, ನಗರ ಗೌರವಾಧ್ಯಕ್ಷ ಡಾ.ಭಾಸ್ಕರ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹಿದ್, ಕಾರ್ಯಾಧ್ಯಕ್ಷ ಅನ್ವರ್ ಪಾಷಾ, ದಲಿತ ಮುಖಂಡ ಶಿವಲಿಂಗಮೂರ್ತಿ, ಕನ್ನಡಪರ ಹೋರಾಟಗಾರ ಹಿಂಡಿಸ್ಕೆರೆ ರವಿ, ಸಂಘಟನೆಯ ಪದಾಧಿಕಾರಿಗಳಾದ ಆಕಾಶ್, ಅಕ್ಬರ್ ಬಾಬು ಮತ್ತು ರವೀಶ್ ಸೇರಿದಂತೆ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.
ವರದಿ : ಆನಂದ್ ತಿಪಟೂರು
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700