67ನೇ ಕನ್ನಡ ರಾಜ್ಯೋತ್ಸವದಂದೇ ನಟ ಯುವರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ರಾಜ್ಯದ ಅತ್ಯುನ್ನತ ಪ್ರಶಸ್ತಿ ಕರ್ನಾಟಕ ರತ್ನ ಪ್ರಶಸ್ತಿಯನ್ನ ಪ್ರದಾನ ಮಾಡಲಾಯಿತು.
ವಿಧಾನಸೌಧದ ಮುಂಭಾಗದಲ್ಲಿ ನಡೆದ ಸಮಾರಂಭದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. ನಟ ಪುನೀತ್ ರಾಜ್ ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಪ್ರಶಸ್ತಿ ಸ್ವೀಕರಿಸಿದರು.
ಈ ಕ್ಷಣಕ್ಕೆ ಹಿರಿಯ ನಟ ರಜನಿಕಾಂತ್ ಮತ್ತು ಜೂನಿಯರ್ ಎನ್ಟಿಆರ್, ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ, ನಟ ಶಿವರಾಜ್ ಕುಮಾರ್ ಹಾಗೂ ಸಚಿವರು, ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ಧ ಅಭಿಮಾನಿಗಳು ಸಾಕ್ಷಿಯಾದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಹಿರಿಯ ನಟ ರಜನಿಕಾಂತ್, 67ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಎಲ್ಲರೂ ಜಾತಿ ಮತ ಬೇಧವಿಲ್ಲದೆ ನೆಮ್ಮದಿಯಿಂದ ಇರಬೇಕು. ರಾಜರಾಜೇಶ್ವರಿ, ಅಲ್ಲ, ಜೀಸಸ್ ನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಪುನೀತ್ ದೇವರ ಮಗು ಎಂದರು.
ನಟ ಜ್ಯೂ. ಎನ್ ಟಿಆರ್ ಮಾತನಾಡಿ, ಪುನೀತ್ ರವರು ಬರೀ ವ್ಯಕ್ತಿತ್ವದಿಂದ ಅಭಿಮಾನಿಗಳನ್ನ ಪಡೆದಿದ್ದರು. ಪುನೀತ್ ಇಡೀ ರಾಜ್ಯವನ್ನು ಗೆದ್ದಿದ್ದರು. ದಿ. ಪುನೀತ್ ಅವರು ಗ್ರೇಟ್ ಆಕ್ಟರ್ ಆಗಿದ್ದರು . ಹೆಮ್ಮೆಯ ಗೆಳೆಯನಿಗಾಗಿ ನಾನು ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


