ಪುಣೆಯಲ್ಲಿ ಜಾಹೀರಾತು ಫಲಕ ಕುಸಿದು ಐವರು ಸಾವು ಮೃತರಲ್ಲಿ ನಾಲ್ವರು ಮಹಿಳೆಯರು. ಪುಣೆಯ ಪಿಂಪ್ರಿ ಚಿಂಚ್ ವಾಡ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಭಾರೀ ಮಳೆ ಹಾಗೂ ಗಾಳಿಗೆ ಜಾಹೀರಾತು ಫಲಕ ಕುಸಿದು ಬಿದ್ದಿದೆ.
ಅಪಘಾತ ಸಂಭವಿಸಿದ ತಕ್ಷಣ ಪೊಲೀಸರು, ಆಂಬ್ಯುಲೆನ್ಸ್ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದರು. ಬೋರ್ಡಿನಡಿ ಸಿಲುಕಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹತ್ ಬೋರ್ಡ್ ತೆಗೆದು ಫಲಕದ ಅಡಿಯಲ್ಲಿ ಸಿಲುಕಿದವರನ್ನುವರನ್ನು ರಕ್ಷಿಸಲು ಕ್ರೇನ್‌ಗಳನ್ನು ನಿಯೋಜಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


