ಬಿಬಿಎಂಪಿ ವ್ಯಾಪ್ತಿಯಲ್ಲಿ ಕೆರೆಗಳು ಹಾಗೂ ರಾಜಕಾಲುವೆ ಒತ್ತುವರಿ ತೆರವಿನ ಜವಾಬ್ದಾರಿಯನ್ನು ತಹಶೀಲ್ದಾರ್ ಹಾಗೂ ವಲಯ ಕಾರ್ಯಪಾಲಕ ಎಂಜಿನಿಯರ್ ಗಳಿಗೆ ವಹಿಸಲಾಗಿದೆ. ಅವರು ವಿಫಲರಾದರೆ ಶಿಸ್ತುಕ್ರಮ ಜರುಗಿಸಲು ಸರ್ಕಾರ ಸೂಚಿಸಿದೆ.
ಹೈಕೋರ್ಟ್‌ನಿಂದ ಸಾಕಷ್ಟು ಬಾರಿ ಆಕ್ಷೇಪಕ್ಕೆ ಒಳಗಾಗಿರುವ ರಾಜ್ಯ ಸರ್ಕಾರ ಇದೀಗ ಕೆರೆಗಳು ಹಾಗೂ ರಾಜಕಾಲುವೆ ಒತ್ತುವರಿ ತೆರವು ಹಾಗೂ ರಕ್ಷಣೆ ಜವಾಬ್ದಾರಿಯನ್ನು ಅಧಿಕಾರಿಗಳಿಗೆ ವಹಿಸಿದೆ.


