nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿ

    October 16, 2026

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿ
    • ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ
    • ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ
    • ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾನೂನು ಪಾಲನೆ ಮಾಡದಿದ್ದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ: ಗೃಹ ಸಚಿವ ಪರಮೇಶ್ವರ
    ರಾಜ್ಯ ಸುದ್ದಿ July 9, 2024

    ಕಾನೂನು ಪಾಲನೆ ಮಾಡದಿದ್ದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ: ಗೃಹ ಸಚಿವ ಪರಮೇಶ್ವರ

    By adminJuly 9, 2024No Comments2 Mins Read
    g parameshwar

    ಬೆಂಗಳೂರು: ಈ ನೆಲದಲ್ಲಿ ಉಳ್ಳವರಿಗೂ, ಬೀದಿಯಲ್ಲಿ ಕೂಲಿ ಕೆಲಸ ಮಾಡುವರಿಗೂ ಒಂದೇ ಕಾನೂನು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.

    ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದ ರಾಷ್ಟ್ರಪತಿಗಳ ಹಾಗೂ ಮುಖ್ಯಮಂತ್ರಿಗಳ ಪದಕ ಪ್ರಧಾನ ಮತ್ತು ಸನ್ನಡತೆಯ ಶಿಕ್ಷಾ ಬಂದಿಗಳ ಅವಧಿಪೂರ್ವ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

    ದುಡ್ಡಿದ್ದವರಿಗೆ, ವಿದ್ಯಾವಂತರಿಗೆ, ಬಡವರಿಗೆ ಬೇರೆಬೇರೆ ಕಾನೂನುಗಳನ್ನು ರೂಪಿಸಿಲ್ಲ. ಎಲ್ಲರಿಗೂ ಒಂದೇ ರೀತಿಯ ಮತದಾನದ ಹಕ್ಕನ್ನು ಕಲ್ಪಿಸಲಾಗಿದೆ. ನಾವೆಲ್ಲ ಕಾನೂನು ಪರಿಪಾಲನೆ ಮಾಡಬೇಕು. ಇಲ್ಲವಾದರೆ ಶಿಕ್ಷೆ ಅನುಭವಿಸುವುದು ಕಟ್ಟಿಟ್ಟ ಬುತ್ತಿ ಎಂದರು.

    ಮನುಷ್ಯ ಪ್ರಕೃತಿಯ ನಿಯಮವನ್ನು ಅರ್ಥ ಮಾಡಿಕೊಳ್ಳಬೇಕು. ಉತ್ತಮವಾಗಿ ನಡೆದುಕೊಂಡರೆ ಸಮಾಜ ಗುರುತಿಸುತ್ತದೆ. ಕೆಲ ಸಂದರ್ಭಗಳಲ್ಲಿ ನಮಗೆ ಗೊತ್ತಿದ್ದೋ, ಗೊತ್ತಿಲ್ಲದೆಯೋ ಆ ಕ್ಷಣಾರ್ಧದಲ್ಲಿ ತೆಗೆದುಕೊಳ್ಳುವ ತೀರ್ಮಾನದಿಂದ ತಪ್ಪುಗಳನ್ನು ಮಾಡಿರುತ್ತೇವೆ. ತಪ್ಪುಗಳನ್ನು ತಿದ್ದಿಕೊಳ್ಳಬೇಕು. ಇದರ ಪಶ್ಚಾತಾಪದಿಂದ ಜೀವನದ ಹೊಸ ಹಾದಿಯತ್ತ ಸಾಗಬೇಕು ಎಂದು ಹೇಳಿದರು.

    ಮಾಡಿದ ತಪ್ಪನ್ನು ತಿದ್ದಿಕೊಂಡವರಿಗೆ ಕಾನೂನಿನಲ್ಲಿ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲಾಗುತ್ತಿದೆ. ಈ ಹಿಂದೆ ವರ್ಷಕ್ಕೆ ಎರಡು ಬಾರಿ ಬಿಡುಗಡೆ ಮಾಡಲಾಗುತ್ತಿತ್ತು. ಸುಪ್ರೀಂ ಕೋರ್ಟ್ ಆದೇಶದಂತೆ ವರ್ಷಕ್ಕೆ ಮೂರು ಬಾರಿ ಬಿಡುಗಡೆ ಸನ್ನಡತೆ ಮೇಲೆ ಮಾಡಲಾಗುತ್ತಿದೆ. ನಿಮ್ಮಲ್ಲಿಯೇ ಪರಿವರ್ತನೆ ತಂದುಕೊಂಡರೆ, ಸಮಾಜದಲ್ಲಿ ಬದುಕಲು ಮತ್ತೊಂದು ಅವಕಾಶ ಸಿಗುತ್ತದೆ ಎಂದು ತಿಳಿಸಿದರು.

    ಜೀವನ ತುಂಬ ವೇಗವಾಗಿ ಸಾಗುತ್ತಿದೆ. ಯಾವುದೇ ಕಾರಣಕ್ಕು ನೀವು ಮತ್ತೊಂದು ತಪ್ಪನ್ನು ಮಾಡಬೇಡಿ. ನಿಮ್ಮ ಕುಟುಂಬದ ಜೊತೆ ಉಳಿದ ಜೀವನವನ್ನು ಸಾಗಿಸಬೇಕು ಎಂದು ಕಿವಿಮಾತು ಹೇಳಿದರು.

    ರಾಜ್ಯದ 54 ಕಾರಾಗೃಹಗಳಲ್ಲಿ 15 ಸಾವಿರಕ್ಕೂ ಜನರಿದ್ದಾರೆ. ಎಲ್ಲರನ್ನು ಸುರಕ್ಷಿತವಾಗಿಡಬೇಕು, ವಿವಿಧ ಕೌಶಲ ತರಬೇತಿ, ಶಿಕ್ಷಣದ ಮೂಲಕ ಅವರನ್ನು ಸುಧಾರಿಸಿ ಪರಿವರ್ತನೆ ತರುವ ಜವಾಬ್ದಾರಿಯು ಇಲಾಖೆಯ ಮೇಲಿದೆ. ಈ ನಿಟ್ಟಿನಲ್ಲಿ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ಅನೇಕ ಬೇಡಿಕೆಗಳ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿದ್ದಾರೆ. ಎಲ್ಲ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಮಹಾನಿರ್ದೇಶಕರಾದ ಮಾಲಿನಿ ಕೃಷ್ಣಮೂರ್ತಿ, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಆನಂದ್ ರೆಡ್ಡಿ, ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರು ಉಪಸ್ಥಿತರಿದ್ದರು.

    ಕಳೆದ 15 ವರ್ಷಗಳಿಂದ ಜೈಲು ವಾಸ ಅನುಭವಿಸಿದ್ದೇನೆ. ಆಕಸ್ಮಿಕ ಘಟನೆಯಿಂದ ಜೈಲಿಗೆ ಬರಬೇಕಾಯಿತು. ನನ್ನ ಮಗಳ ಉನ್ನತ ವ್ಯಾಸಂಗದ ಗುರಿ ಸಾಧಿಸಲು ಆಗಲಿಲ್ಲ. ಜೈಲಿನಲ್ಲಿದ್ದುಕೊಂಡು ಬಿ.ಎ. ಪದವಿ ಪೂರರಣಗೊಳಿಸಿದ್ದೇನೆ. ಈ ದಿನ ನನಗೆ ಪುನರ್ ಜನ್ಮ. ಉತ್ತಮ ನಾಗರಿಕನಾಗಿ ಜೀವನ ಸಾಗಿಸುತ್ತೇನೆ ಎಂದು ಸನ್ನಡತೆ ಮೇಲೆ ಬಿಡುಗಡೆ ಹೊಂದಿದ ದಾನೇಶ್ ಎಂಬಾತ ಅಭಿಪ್ರಾಯ ಹಂಚಿಕೊಂಡರು.

    ವಿವಿಧ ನಾಲ್ಕು ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯಲ್ಲಿ ಡಿಪ್ಲೋಮಾ ಕೋರ್ಸ್‌ಗಳನ್ನು ಪೂಋಣಗೊಳಿಸಿದ್ದು, ನನ್ನ ಮುಂದಿನ ಜೀವನ ನಡೆಸಲು ಸಹಕಾರಿಯಾಗಲಿವೆ. ಇಂದಿನಿಂದ ನನ್ನ ಜೀವನದ ಹೊಸ ಅಧ್ಯಾಯ ಆರಂಭವಾಗಿದೆ. ಆಹಾರ ಮತ್ತು ಸ್ವಾತಂತ್ರ್ಯದ ಮಹತ್ವ ಏನೆಂಬುದು ಜೈಲು ವಾಸದಲ್ಲಿ ಗೊತ್ತಾಗಿದೆ ಎಂದು ಸನ್ನಡತೆಯ ಮೇಲೆ ಬಿಡುಗಡೆಯಾದ ಸತೀಶ್ ಆಚಾರ್ಯ ಎಂಬಾತ ತನ್ನ ಅನಿಸಿಕೆಯನ್ನು ಹೇಳಿಕೊಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನವರಾತ್ರಿ

    October 16, 2026

    ವಿ.ಎಂ.ಎಸ್.ಗೋಪಿ ಮೈಸೂರು ದಸರಾ ಎಷ್ಟೊಂದು ಸುಂದರ ನವರಾತ್ರಿ ಉತ್ಸವ ಹಬ್ಬದ ಸಡಗರ ಎಲ್ಲೆಲ್ಲೂ ಸಂಭ್ರಮ ನವ ಅವತಾರಗಳು ಶೈಲಪುತ್ರಿ ದುರ್ಗೆ…

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.