ಹಿರಿಯೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ತರಗತಿಗಳು ನಡೆಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ಕೊರೊನಾ 2ನೇ ಅಲೆಗೆ ತತ್ತರಿಸಿದ ಕರ್ನಾಟಕ ಹಂತ ಹಂತವಾಗಿ ಇದೀಗ ಸಹಜ ಸ್ಥಿತಿಗೆ ಮರಳಿದೆ. ಈಗ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಈಗಾಗಲೇ ಪದವಿ ಸ್ನಾತಕೋತ್ತರ ತರಗತಿಗಳೆಲ್ಲವೂ ಸಹಜ ಸ್ಥಿತಿಗಳಲ್ಲಿ ನಡೆಯುತ್ತಿದ್ದು, ಶಾಲಾ, ಕಾಲೇಜುಗಳು ಮರು ಪ್ರಾರಂಭವಾಗಿವೆ. ಆದರ, ಭೌತಿಕ ತರಗತಿಗಳು ಆರಂಭಗೊಂಡರೂ ಸಹ ಇನ್ನೂ ರಾಜ್ಯದ ಪ್ರಥಮ ದರ್ಜೆ – ಕಾಲೇಜುಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ಪೂರ್ಣ – ಪ್ರಮಾಣದ ಪಾಠಗಳು ನಡೆಯದಿರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
ರಾಜ್ಯ-ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ – ಕಾಲೇಜುಗಳಿಗೆ ಅತಿಥಿ-ಉಪಾನ್ಯಾಸಕರನ್ನು ಸರ್ಕಾರ ಒಂದು ತಿಂಗಳು ತಡವಾಗಿ ನೇಮಿಸಿಕೊಂಡಿದ್ದು, ಅದು ಅವಶ್ಯಕತೆಗಿಂತ ಕಡಿಮೆ ಎಂದರೇ 80 ಪ್ರತಿಶತ ಉಪಾನ್ಯಾಸಕರನ್ನು ನೇಮಿಸಿಕೊಂಡಿದೆ . ಆದರೆ ಕಳೆದ ಅಕ್ಟೋಬರ್ 28 ರಿಂದ ಅತಿಥಿ ಉಪನ್ಯಾಸಕರು ಪಾಠಗಳನ್ನು ಮಾಡುತ್ತಿದ್ದರೂ ಆದರೆ ಕಳೆದ ಶುಕ್ರವಾರದಿಂದ ಅಂದರೆ ದಿನಾಂಕ 10-12-2021 ರಿಂದ ಅತಿಥಿ – ಉಪನ್ಯಾಸಕರು ತರಗತಿಗಳನ್ನು ಬಹಿಷ್ಕರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಪ್ರತಿದಿನ ವಿದ್ಯಾರ್ಥಿಗಳು ಪಾಠ ಕೇಳಲು ಕಾಲೇಜಿಗೆ ಬಂದರೆ, ತರಗತಿಗಳು ನಡೆಯದಿರುವುದು ಶೋಚನೀಯ ಸ್ಥಿತಿಯಾಗಿದೆ. ವಿದ್ಯಾರ್ಥಿಗಳಿಗೆ ಸಿ-1 ಪರೀಕ್ಷೆ ಈ ತಿಂಗಳ ಕೊನೆಯಲ್ಲಿ ಬರುವುದರಿಂದ, ಆದಷ್ಟು ಬೇಗ ಕರ್ನಾಟಕ ರಾಜ್ಯ ಸರ್ಕಾರವು ಈ ಎಲ್ಲಾ ಸಮಸ್ಯೆಗಳಿಗೆ ತಕ್ಕ ಪರಿಹಾರ ಕಂಡುಹಿಡಿಯಬೇಕು ಹಾಗೂ ಇನ್ನುಳಿದ 20 ಪ್ರತಿಶತ ಅತಿಥಿ ಉಪಾನ್ಯಾಸಕರನ್ನು ಆದಷ್ಟು ಬೇಗ ಸರ್ಕಾರವು ನೇಮಕ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸುವಂತೆ ಸರ್ಕಾರವು ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸಿದೆ.
ಈ ಸಂಬಂಧಪಟ್ಟಂತೆ ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ದವಾಗಿ ಉಗ್ರ ಹೋರಾಟ ಮಾಡಬೇಕಾಗಿರುತ್ತದೆ ಎಂಬುದಾಗಿ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು, ಹಿರಿಯೂರು ತಾಲ್ಲೂಕಿನ ತಹಶೀಲ್ದಾರವರ ಮುಖಾಂತರ ರಾಜ್ಯ ಮುಖ್ಯಮಂತ್ರಿಯವರಿಗೆ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು .
ಈ ಸಂದರ್ಭದಲ್ಲಿ ತಾಲ್ಲೂಕು ಸಂಚಾಲಕ ಮಂಜೇಶ್, ನಗರ ಕಾರ್ಯದರ್ಶಿ ರಾಘವೆಂದ್ರ, ಜಿಲ್ಲಾ ಸಂಚಾಲಕರಾದ ಆದರ್ಶ್ ಹಾಗೂ ಕಾಲೇಜಿನ ವಿದ್ಯಾರ್ಥಿನಿ/ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು ಹಾಗೂ ತಾಲ್ಲೂಕಿನ ಸಾರ್ವಜನಿಕರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.