ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರದ ಪ್ರಧಾನ ರಸ್ತೆಯಲ್ಲಿರುವ ನೆಹರು ಮೈದಾನದಲ್ಲಿ ನ್ಯೂಡೈಮಂಡ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಖೋಖೋ ಸಂಸ್ಥೆ ಬೆಂಗಳೂರು, ಚಿತ್ರದುರ್ಗ ಜಿಲ್ಲೆ ಖೋಖೋ ಸಂಸ್ಥೆ, ಇವರುಗಳ ಸಂಯುಕ್ತಾಶ್ರಯದಲ್ಲಿ ಪುರುಷರ ಹಾಗೂ ಮಹಿಳೆಯರ ದೀಪಾಲಂಕೃತ ಖೋಖೋ ಅಸೋಸಿಯೇಷನ್ ಕಪ್-2022 ಕ್ರೀಡಾಕೂಟವನ್ನು ಆಯೋಜಿಸಲಾಗಿದೆ.
ಈ ಕ್ರೀಡಾಕೂಡದ ಸಾರಥ್ಯವನ್ನು ಕ್ಷೇತ್ರದ ಶಾಸಕರಾದ ಪೂರ್ಣಿಮಾ ಶ್ರೀನಿವಾಸ್ ವಹಿಸಲಿದ್ದು, ರಾಜ್ಯ ಪ್ರವರ್ಗ-1ರ ಒಕ್ಕೂಟಗಳ ಅಧ್ಯಕ್ಷರಾದ ಡಿ.ಟಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಜುಲೈ 22, ರಿಂದ 24 ರವರೆಗೆ 3 ದಿನಗಳ ಕಾಲ ಕ್ರೀಡಾಕೂಟ ನಡೆಸಲು ನೆಹರು ಕ್ರೀಡಾಂಗಣ ಸಿದ್ಧವಾಗುತ್ತಿದೆ.
ಕ್ರೀಡಾಕೂಟದ ಹಿನ್ನೆಲೆಯಲ್ಲಿ ಡಿ.ಟಿ.ಶ್ರೀನಿವಾಸ್ ಹಾಗೂ ಕೆ.ಪೂರ್ಣಿಮಾ ಶ್ರೀನಿವಾಸ್ ಈ ಕ್ರೀಡಾಂಗಣಕ್ಕೆ ಭೇಟಿ ನೀಡಿ, ಕ್ರೀಡಾಪಟುಗಳು ಮತ್ತು ಕ್ರೀಡಾಭಿಮಾನಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಪತ್ರಿಕಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕ್ರೀಡಾಕೂಟಕ್ಕೆ ಬರುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಸಿಬ್ಬಂದಿಗೆ ಸೂಚನೆ ನೀಡಿದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz