nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    • ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ
    • ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕದಲ್ಲಿ ವ್ಯವಹರಿಸಲು ಕನ್ನಡದಲ್ಲಿ ನಾಮಫಲಕ ಹಾಕಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
    ರಾಜ್ಯ ಸುದ್ದಿ December 29, 2023

    ಕರ್ನಾಟಕದಲ್ಲಿ ವ್ಯವಹರಿಸಲು ಕನ್ನಡದಲ್ಲಿ ನಾಮಫಲಕ ಹಾಕಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    By adminDecember 29, 2023No Comments2 Mins Read
    prahladh joshi

    ಹುಬ್ಬಳ್ಳಿ: ಕರ್ನಾಟಕದಲ್ಲಿ ವ್ಯವಹಾರ ನಡೆಸುವ ಅಂಗಡಿ, ಉದ್ದಿಮೆಗಳ ಮಾಲೀಕರು ಕಡ್ಡಾಯವಾಗಿ ಕನ್ನಡದಲ್ಲಿ ನಾಮಫಲಕ ಹಾಕಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ  ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕಬೇಕು ಎಂದು ಕನ್ನಡ ಸಂಘಟನೆಗಳು ಹೋರಾಟಕ್ಕಿಳಿದಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವರು, ನನಗೆ ಬಂದಿರುವ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಕೆಲವು ಅಂಗಡಿಯವರು ಉದ್ದೇಶಪೂರ್ವಕವಾಗಿ ಕನ್ನಡ ಬೋರ್ಡ್ ಹಾಕಲು ಬಯಸುವುದಿಲ್ಲ. ಇದನ್ನು ನಾನು ಒಪ್ಪುವುದಿಲ್ಲ ಎಂದರು.

    ಕರ್ನಾಟಕದಲ್ಲಿ ಬಹುಪಾಲು ಜನತೆ ಕನ್ನಡ ಮಾತನಾಡುವವರಿದ್ದಾರೆ. ಹೀಗಿರುವಾಗ, ಆಂಗ್ಲ ಮತ್ತು ಹಿಂದಿಯೊಂದಿಗೆ ಕನ್ನಡವನ್ನು ಸೇರಿಸುವಲ್ಲಿ ಅಂಗಡಿ ಮಾಲೀಕರಿಗೆ ಸಮಸ್ಯೆ ಏನು? ಈ ಬಗ್ಗೆ ಜನರು ಪ್ರಶ್ನಿಸಿದಾಗ ಕೆಲ ಉದ್ದಿಮೆಗಳ ಮಾಲೀಕರು ದುರಹಂಕಾರದಿಂದ ವರ್ತಿಸಿದ್ದಾರೆ. ನಾನು ಹಿಂಸಾಚಾರವನ್ನು ಒಪ್ಪುವುದಿಲ್ಲ, ಆದರೆ ಅವರು ಕನ್ನಡ ನಾಮಫಲಕಗಳನ್ನು ಪ್ರದರ್ಶಿಸಲು ಹಿಂದೇಟು ಹಾಕೋದ್ಯಾಕೆ? 20-30% ಅಂಗಡಿಯವರು ಸಹ ಕನ್ನಡದಲ್ಲಿ ಬೋರ್ಡ್ ಹಾಕುವುದಿಲ್ಲ. ಇದು ತಪ್ಪು. ಇಂಗ್ಲೀಷ್ ನ ಜೊತೆಗೆ ಕನ್ನಡದಲ್ಲಿ ನಾಮಫಲಕ ಹಾಕಿದರೆ ತೊಂದರೆಯೇನು? ಇದು ಬ್ರಿಟನ್ ಅಥವಾ ಇಂಗ್ಲೆಂಡ್ ಅಲ್ಲ. ಎಲ್ಲರಿಗೂ ಇಂಗ್ಲಿಷ್ ಭಾಷೆ ತಿಳಿಯುವುದಿಲ್ಲ, ಸಂಪೂರ್ಣವಾಗಿ ಇಂಗ್ಲಿಷ್ ನಲ್ಲಿ ಮಾತ್ರವೇ ನಾಮಫಲಕ ಹಾಕೋದ್ಯಾಕೆ? ಇದನ್ನ ಅಂಗಡಿಯವರು ಅರ್ಥಮಾಡಿಕೊಳ್ಳಬೇಕು. ಎಲ್ಲಾ ಅಂಗಡಿಗಳ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಇರಲೇಬೇಕು. ಇದನ್ನ ಅಂಗಡಿಗಳ ಮಾಲೀಕರು ಪಾಲಿಸಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ವಿಚಾರವಾಗಿ ನಡೆಯುತ್ತಿರುವ ಹಿಂಸೆಯನ್ನು ನಾನು ಒಪ್ಪುವುದಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

    ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸಿದ್ದು, ಈ ವೇಳೆ ಕಲ್ಲು ತೂರಾಟ ನಡೆದ ಹಿನ್ನೆಲೆ 29 ಕಾರ್ಯಕರ್ತರನ್ನು ಬಂಧಿಸಿ ಪರಪ್ಪನ ಅಗ್ರಹಾರಕ್ಕೆ ಕಳಿಸಲಾಗಿದೆ. ಫಲಕದಲ್ಲಿ ಕಡ್ಡಾಯ ಕನ್ನಡ ಬಳಕೆಗೆ ಆಗ್ರಹಿಸಿ ಕರವೇ ನಡೆಸಿದ ಪ್ರತಿಭಟನೆ ವೇಳೆ ನಾರಾಯಣಗೌಡ ಸೇರಿ 29 ಕರವೇ ಕಾರ್ಯಕರ್ತರನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಒಪ್ಪಿಸಿದ್ದು ಬೆಂಗಳೂರು ಗ್ರಾ. ಜಿಲ್ಲೆಯ ದೇವನಹಳ್ಳಿ JMFC ಕೋರ್ಟ್ ಜಡ್ಜ್ ಕರವೇ ಕಾರ್ಯಕರ್ತರಿಗೆ ಜನವರಿ 10ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದ್ದಾರೆ. ಸದ್ಯ ನ್ಯಾಯಾಂಗ ಬಂಧನ ಹಿನ್ನೆಲೆ ಬಂಧಿತ ಕರವೇ ಕಾರ್ಯಕರ್ತರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

    admin
    • Website

    Related Posts

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ

    September 7, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    ಪಾವಗಡ: ತಾಲ್ಲೂಕಿನ ಜನರ ಸಮಸ್ಯೆಗಳನ್ನು ಆಲಿಸಿ, ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘ಪ್ರಜಾ ಸೇವಾ’ ಆಂದೋಲನದ…

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.