ವಾಷಿಂಗ್ಟನ್: ಉಕ್ರೇನ್ ವಿರುದ್ಧ ರಷ್ಯಾ ಮಾರಣಾಂತಿಕ ಡ್ರೋನ್ ದಾಳಿ ನಡೆಸಿರುವ ಹಿನ್ನೆಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವ್ಲಾಡಿಮಿರ್ ಪುಟಿನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯುದ್ಧ ಪೀಡಿತ ಉಭಯ ರಾಷ್ಟ್ರಗಳು ದೊಡ್ಡ ಪ್ರಮಾಣದ ಕೈದಿಗಳ ವಿನಿಮಯ ಪೂರ್ಣಗೊಳಿಸಿದರೂ ರಷ್ಯಾ ಮತ್ತೆ ಡ್ರೋನ್ ದಾಳಿ ನಡೆಸಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಟ್ರಂಪ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಹುಚ್ಚ ಎಂದು ಕರೆದಿದ್ದಾರೆ.
ಭಾನುವಾರ ರಾತ್ರಿ ಉಕ್ರೇನ್ ವಿರುದ್ಧ ರಷ್ಯಾ ಬೃಹತ್ ಡ್ರೋನ್ ದಾಳಿ ನಡೆಸಿದ್ದರಿಂದ ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ವ್ಲಾಡಿಮಿರ್ ಪುಟಿನ್ ಅವರೊಂದಿಗೆ ತಾಳ್ಮೆ ಕಳೆದುಕೊಳ್ಳುತ್ತಿರುವುದಾಗಿ ಟ್ರಂಪ್ ಸ್ಪಷ್ಟಪಡಿಸಿದ್ದು, ರಷ್ಯಾದ ನಾಯಕನ ವಿರುದ್ಧ ತೀಕ್ಷ್ಣವಾಗಿ ಟೀಕೆಗಳನ್ನು ಮಾಡಿದ್ದಾರೆ.
ಪುಟಿನ್ ಜೊತೆಗೆ ಯಾವಾಗಲೂ ಉತ್ತಮ ಸಂಬಂಧ ಹೊಂದಿದ್ದೇನೆ. ಆದರೆ ಅವರಿಗೆ ಏನೋ ಆಗಿದೆ. ಅವರು ಸಂಪೂರ್ಣವಾಗಿ ಹುಚ್ಚರಾಗಿದ್ದಾರೆ! ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW