nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    • ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    • ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
    • ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
    • ನ.19ರಂದು ಎಲ್.ಜಿ.ಹಾವನೂರು ಪ್ರತಿಮೆ ಅನಾವರಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಲಾಮಗಿರಿ ಮನಸ್ಥಿತಿ ಕಿತ್ತೊಗೆಯಲು ಗುಣಮಟ್ಟದ ಶಿಕ್ಷಣ ಸಿಗಬೇಕು: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ December 7, 2024

    ಗುಲಾಮಗಿರಿ ಮನಸ್ಥಿತಿ ಕಿತ್ತೊಗೆಯಲು ಗುಣಮಟ್ಟದ ಶಿಕ್ಷಣ ಸಿಗಬೇಕು: ಸಿಎಂ ಸಿದ್ದರಾಮಯ್ಯ

    By adminDecember 7, 2024No Comments2 Mins Read
    siddaramaiah

    ಬೆಂಗಳೂರು: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಡಾ.ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ 109ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಬದಲಾವಣೆ ತರಲು, ಮುಖ್ಯವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣ ಇಲ್ಲದೇ ಹೋದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವಾಗುವುದಿಲ್ಲ. ಗುಲಾಮಗಿರಿ ಮನಸ್ಥಿತಿಯನ್ನು ಕಿತ್ತೊಗೆಯಬೇಕೆಂದರೆ ವೈಜ್ಞಾನಿಕ ಶಿಕ್ಷಣದಿಂದ ಸಾಧ್ಯ ಎಂದರು.


    Provided by
    Provided by

    ಧರ್ಮ ಹಾಗೂ ಶಿಕ್ಷಣ ನೀಡುವ ಕೆಲಸವನ್ನು ಸುತ್ತೂರು ಸಂಸ್ಥೆಗಳು ಮಾಡುತ್ತಿವೆ. ಅದಕ್ಕೆ ಅಡಿಪಾಯವನ್ನು ಹಾಕಿದವರು ರಾಜೇಂದ್ರ ಮಹಾಸ್ವಾಮಿಗಳು. ಅವರು ಬಯಸಿದಂತಹ ಸಮಾಜ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ ಎಂದರು.

    ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಒಬ್ಬ ಶ್ರೇಷ್ಠ ಸಂತರು. ಇಡೀ ಸಮಾಜಕ್ಕೆ ಮಾನವೀಯತೆಯ ಸಂದೇಶವನ್ನು ಸಾರಿದ್ದರು. ಆ ಕಾಲದಲ್ಲಿಯೇ ರಾಜೇಂದ್ರ ಮಹಾಸ್ವಾಮಿಗಳು ಗ್ರಾಮೀಣ ಮಕ್ಕಳಿಗೆ ಶಿಕ್ಷಣ, ವಸತಿನಿಲಯ ನಿರ್ಮಿಸಿದ್ದರಿಂದ ಇಂದು ಸುತ್ತೂರು ಮಹಾಸಂಸ್ಥಾನ ಹೆಮ್ಮರವಾಗಿ ಬೆಳೆಯಲು ಸಾಧ್ಯವಾಗಿದೆ. ಅವರ ಕಾಲದಲ್ಲಿ ಸಣ್ಣ ಝರಿಯಾಗಿದ್ದ ಸಂಸ್ಥೆ ಇಂದು ದೊಡ್ಡ ಸಮುದ್ರವಾಗಿದೆ. ಬಸವಣ್ಣನವರ ಸಂದೇಶವನ್ನು ರಾಜೇಂದ್ರ ಮಹಾಸ್ವಾಮಿಗಳು ಬಹಳ ವ್ಯಾಪಕವಾಗಿ ದೇಶ, ವಿದೇಶಗಳಲ್ಲಿಯೂ ಪಸರಿಸಿದ್ದಾರೆ ಎಂದರು.

    ಮಾನವ ಸಮಾಜದಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಜಾತಿ, ಧರ್ಮ, ಭಾಷೆಯ ಆಧಾರದ ಮೇಲೆ ಧ್ವೇಷಿಸುವುದನ್ನು ಸಂಪೂರ್ಣವಾಗಿ ಬಿಡಬೇಕು. ಎಲ್ಲರೂ ಕೂಡ ಮಾನವ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕೆಂದು ಸಂತರು, ಸಾಧುಗಳು, ಸೂಫಿಗಳು, ಸಮಾಜ ಸುಧಾರಕರು ಈ ದೇಶದಲ್ಲಿ ಹೇಳಿದ್ದಾರೆ. ಸುತ್ತೂರು ಗ್ರಾಮದಿಂದ ಬಂದ ಸ್ವಾಮಿಗಳು ಹಳ್ಳಿ ಜನರ ಬದುಕನ್ನು ಅರ್ಥ ಮಾಡಿಕೊಂಡಿದ್ದರು. ಸಮಾಜದಲ್ಲಿ ಅನೇಕ ನೂನ್ಯತೆ, ಅಸಮಾನತೆಗಳನ್ನು ಕಾಣುತ್ತೇವೆ. ಅಸಮಾನತೆ ನಿರ್ಮಾಣವಾಗಿದ್ದರೆ ಜಾತಿ ವ್ಯವಸ್ಥೆಯ ಕಾರಣದಿಂದ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಬಹುಸಂಖ್ಯಾತ ಜನ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದರು.

    ವ್ಯಕ್ತಿಯ ಯೋಗ್ಯತೆಯನ್ನು ಅವನ ಜಾತಿಯ ಆಧಾರದ ಮೇಲೆ ಅಳೆಯಲಾಗುತ್ತದೆ. ನೈಜ ಪ್ರತಿಭೆಯನ್ನು ಸಾಧನೆಯಿಂದ ಅಳೆಯಲಾಗುತ್ತದೆ. ಇದನ್ನು ಕಣ್ಣಾರೆ ಕಂಡಿದ್ದ ರಾಜೇಂದ್ರ ಸ್ವಾಮಿಗಳು ಶಿಕ್ಷಣ ಬಹಳ ಮುಖ್ಯ ಎಂದು ಅರ್ಥ ಮಾಡಿಕೊಂಡಿದ್ದರು. ಸುತ್ತೂರಿನಿಂದ ಮೈಸೂರಿಗೆ ಬಂದ ನಂತರ ವಸತಿ ನಿಲಯಗಳನ್ನು ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭ ಮಾಡಿದರು. ವಸತಿ ನಿಲಯಗಳಿಲ್ಲದೇ ಹೋದರೇ ಬಹಳ ಜನರಿಗೆ ಓದುವ ಅವಕಾಶ ತಪ್ಪುತ್ತಿತ್ತು ಎಂದರು.

    ಸಂವಿಧಾನ ಬಂದ ನಂತರ ಎಲ್ಲರೂ ಸಮಾನ ಅವಕಾಶಗಳನ್ನು ಪಡೆಯುವಂತಾಗಿದೆ. ಯಾರೂ ಯಾರಿಂದಲೂ ಶೋಷಣೆಗೆ ಒಳಗಾಗಬಾರದು, ಎಲ್ಲರಿಗೂ ಸಮಾನ ಶಿಕ್ಷಣ, ಬದುಕುವ ಅವಕಾಶಗಳನ್ನು , ಸಂವಿಧಾನದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ದೊರಕಿಸಿ ಕೊಟ್ಟಿದ್ದಾರೆ. ಅದಕ್ಕಾಗಿಯೇ ನಮ್ಮ ಸರ್ಕಾರ ಸಂವಿಧಾನದ ಪೀಠಿಕೆಯನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲಿಯೂ ಓದಿಸಲಾಗುತ್ತಿದೆ.

    ಸಂವಿಧಾನದ ಆಶಯಗಳು ಹಾಗೂ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು. ಸಂವಿಧಾನ ಗೊತ್ತಿಲ್ಲದೇ ಹೋದರೆ ನಮಗಿರುವ ಹಕ್ಕುಗಳು ಯಾವುವು, ನಮ್ಮ ಕರ್ತವ್ಯಗಳೇನು ಎಂದು ತಿಳಿಯುವುದಿಲ್ಲ. ನಮಗೆ ಹಕ್ಕುಗಳು ತಿಳಿದರೆ ಅವುಗಳನ್ನು ಪಡೆಯುವ ಪ್ರಯತ್ನ ಮಾಡಬಹುದು. ಎಲ್ಲರಿಗೂ ಒಂದೇ ರೀತಿಯ ಹಕ್ಕುಗಳಿವೆ. ದಲಿತರು, ಹಿಂದುಳಿದವರು, ಮುಂದುವರೆದವರು ಬಹುಸಂಖ್ಯಾತರಿಗೆ ಒಂದೇ ರೀತಿಯ ಹಕ್ಕುಗಳಿವೆ ಎಂದರು.

    ಧರ್ಮವನ್ನು ನಾವು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ‘ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ’ ಎಂದು ಬಸವಣ್ಣ ಎಲ್ಲರಿಗೂ ಅರ್ಥವಾಗುವ ರೀತಿಯಲ್ಲಿ ಹೇಳಿದ್ದಾರೆ. ದಯೆ ಪ್ರತಿಯೊಬ್ಬರಲ್ಲಿಯೂ ಇರಬೇಕು. ಅದಕ್ಕಾಗಿಯೇ 12 ನೇ ಶತಮಾನದಲ್ಲಿಯೇ ಸಮಸಮಾಜಕ್ಕಾಗಿ ಕ್ರಾಂತಿ ಮಾಡಿದರು.

    ಕಂದಾಚಾರ, ಮೌಢ್ಯಗಳ ವಿರುದ್ಧ ಹೋರಾಟ ಮಾಡಿದರು, ಜೊತೆಗೆ ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಇದನ್ನು ಅರ್ಥ ಮಾಡಿಕೊಳ್ಳಬೇಕು. ಈಗಲೂ ಅನೇಕರು ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಡುತ್ತಾರೆ. ಸ್ವರ್ಗ ನರಕದ ಕಲ್ಪನೆಯನ್ನು ನಿರಾಕರಿಸಿದ್ದ ಬಸವಣ್ಣ ‘ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ’ ಎಂದು ಹೇಳಿದ್ದರು. ಇದನ್ನು ನಾವು ಪಾಲನೆ ಮಾಡಬೇಕು. ನಾವೆಲ್ಲರೂ ಮನುಷ್ಯರಾಗಿ, ಮಾನವರಾಗಿ ಬದುಕುವ ಪ್ರಯತ್ನ ಮಾಡಬೇಕು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ತುರುವೇಕೆರೆ: ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ತಲುಪಿರುವುದು ವಿಷಾದನೀಯ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಪಟ್ಟಣದ ಜಿಜೆಸಿ ಪ್ರೌಢಶಾಲೆಯಲ್ಲಿ ಮಕ್ಕಳ…

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025

    ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!

    November 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.