ಕಲಬುರಗಿ: ಕಲಬುರಗಿ ನಗರದ ಸರಸ್ವತಿಪುರಂನಲ್ಲಿ ಸ್ನೇಹಿತರ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ. ಅಭಿಷೇಕ್(18) ಮೃತಪಟ್ಟ ಯುವಕನಾಗಿದ್ದಾನೆ.
ಮಾರ್ಚ್ 3ರಂದು ಕಲಬುರಗಿ ನಗರದ ಸರಸ್ವತಿಪುರಂನಲ್ಲಿ ಸ್ನೇಹಿತರ ಮಧ್ಯೆ ಜಗಳವಾಗಿ ಅಭಿಷೇಕ್ ಎಂಬ ಯುವಕನನ್ನು ಥಳಿಸಲಾಗಿತ್ತು. ಈ ಗಲಾಟೆಯಲ್ಲಿ ಗಾಯಗೊಂಡು ಅಭಿಷೇಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


