ಪಾವಗಡ: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರು ಹತ್ಯೆಗೀಡಾದ ಘಟನೆ ಪಾವಗಡದ ಭೂಪೂರು ತಾಂಡಾದಲ್ಲಿ ನಡೆದಿದೆ.
ಭೂಪೂರು ಗ್ರಾಮಕ್ಕೆ ಸೇರಿದ 40 ವರ್ಷದ ಗೋಪಾಲ ನಾಯ್ಕ್ ಎಂಬುವವರು ಚಾಕು ಇರಿತದಿಂದ ಮೃತಪಟ್ಟಿವರಾಗಿದ್ದಾರೆ.,ಮೃತರು ಪತ್ನಿ ಮತ್ತು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಸಂಬಂಧಿಕರನ್ನು ಅಗಲಿದ್ದಾರೆ.ವಿಷಯ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಘಟನೆಯಲ್ಲಿ ನಾಗರಾಜ ನಾಯ್ಕ, ಹೇಮಂತ್ ನಾಯ್ಕ್, ತರುಣ್ ನಾಯ್ಕ್, ಎಂಬುವವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿಯನ್ನು ಪೋಲಿಸರು ಬಂಧಿಸಿ ಬಿಗಿ ಭದ್ರತೆಯೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಲಾಗುತ್ತದೆ.
ತಿರುಮಣಿ ಗ್ರಾಮಾಂತರ ಪೋಲಿಸ್ ಠಾಣೆಯ ಸಿಪಿಐ ಗಿರೀಶ್ ಮತ್ತು ಪಾವಗಡ ಠಾಣೆಯ ಸಿಪಿಐ ಸುರೇಶ್ ಗಾಯಳುಗಳಿಂದ ಘಟನೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ: ನಂದೀಶ್ ನಾಯ್ಕ ಪಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bu0PpuFHlmt705QwiTL3vv
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA