ಪಾವಗಡ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಪಾವಗಡ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಾವಗಡ, ಹಾಗೂ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಪಾವಗಡ. ಇವರ ಸಹಯೋಗದೊಂದಿಗೆ ನಡೆದ ತಾಲ್ಲೂಕು ಮಟ್ಟದ ಹತ್ತನೇ ತರಗತಿಯ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೋಟಗುಡ್ಡ ಸಹನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಚಂದು ಆರ್.ಎಸ್., ಬಿಂದು ಶ್ರೀ ಎನ್., ಗಗನ ಆರ್, ಪ್ರಮೋದ್ ಕುಮಾರ್ ಸಿ., ಸುಪ್ರೀತ್ ರೆಡ್ಡಿ ಆರ್., ಸಂತೋಷ್ ರೆಡ್ಡಿ ಆರ್. ಎಂಬ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದಿರುತ್ತದೆ.
ವಿಜೇತ ತಂಡವನ್ನು 5,000 ನಗದು ಬಹುಮಾನ ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರದೊಂದಿಗೆ ಅಭಿನಂದಿಸಲಾಯಿತು.
ಚಿತ್ರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಕಟ್ಟಾ ನರಸಿಂಹಮೂರ್ತಿ, ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗೇಂದ್ರ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಯತಿಕುಮಾರ್, ಸಹನಾ ಶಾಲೆಯ ಆಡಳಿತಾಧಿಕಾರಿಗಳಾದ ಎನ್. ಶ್ರೀನಿವಾಸ್ ಕ್ವಿಜ್ ಮಾಸ್ಟರ್ ಗಳಾದ ಇ. ಜಯರಾಮ್, ವೆಂಕಟೇಶ್ ಹಾಗೂ ಮಮತಾ.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


