ರಾಜ್ಯದ ವಿಪಕ್ಷ ನಾಯಕನಾಗಿ ಆಯ್ಕೆಯಾದ ಬೆನ್ನಲ್ಲೇ ಆರ್. ಆಶೋಕ್ ಮಾತಾಡಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ವರಿಷ್ಠರಿಗೆ ಧನ್ಯವಾದ ತಿಳಿಸಿದರು.
ಬಿಜೆಪಿಯನ್ನ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ನಿಮ್ಮ ಸಹಕಾರ ಕೊಡಿ ಎಂದು ಜನರಲ್ಲಿ ಮನವಿ ಮಾಡಿದರು. ಇದೇ ವೇಳೆ ನನ್ನ ಮೇಲೆ ನಂಬಿಕೆ ಇಟ್ಟು ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಿದಕ್ಕೆ ಪಕ್ಷದ ವರಿಷ್ಠರಿಗೆ ಧನ್ಯವಾದ ಹೇಳಿದರು.
ರಾಜ್ಯ ಸರ್ಕಾರದ ದುರಾಡಳಿತವನ್ನ ಜನರ ಮುಂದೆ ಇಡವುದೇ ಮೊದಲ ಗುರಿ ಎಂದು ನೂತನ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು. ಬೆಂಗಳೂರಿನಲ್ಲಿ ವಿರೋಧ ಪಕ್ಷದ ನಾಯಕನಾಗಿ ಮಾಜಿ ಸಚಿವ ಆರ್. ಅಶೋಕ್ ಆಯ್ಕೆಯಾದ ಬೆನ್ನಲ್ಲೆ ಪ್ರತಿಕ್ರಿಯೆ ನೀಡಿದರು.
ಈ ವೇಳೆ ಮೊದಲ ಗುರಿ ಸರ್ಕಾರದ ದುರಾಡಳಿತವನ್ನ ಜನರ ಮುಂದೆ ಇಡಬೇಕು. ಈ ಸರ್ಕಾರ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದೆ. ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಗುಡುಗಿದರು.


