ತುಮಕೂರು: ರಾಸಲೀಲೆ ವಿಡಿಯೋ ವೈರಲ್ ಪ್ರಕರಣದಲ್ಲಿ ಬಂಧಿತ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದಾರೆ.
ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಿದ ಬಳಿಕ ನೇರವಾಗಿ ನ್ಯಾಯಾಧೀಶರ ಮುಂದೆ ಮಧುಗಿರಿ ಪೊಲೀಸರು ಹಾಜರುಪಡಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ಮಧುಗಿರಿ JMFC ಕೋರ್ಟ್ನ ಪ್ರಧಾನ ಹಿರಿಯ ನ್ಯಾಯಾಧೀಶೆ ಪ್ರೇಮಿಳಾ ಅವರು, 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದು, ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದರು.
ಡಿವೈಎಸ್ಪಿ ರಾಮಚಂದ್ರಪ್ಪ ಪರವಾಗಿ ಹಿರಿಯ ವಕೀಲ ರಘುನಾಥ್ ರೆಡ್ಡಿ ವಾದ ಮಂಡಿಸಿದರು. ಸಂತ್ರಸ್ತೆ ಪರವಾಗಿ ತಕಾರಾರು ಮಂಡಿಸಲು ಜನವರಿ 7 ವರೆಗೆ ಗಡುವು ನೀಡಲಾಗಿದೆ.
ಡಿವೈಎಸ್ಪಿ ರಾಮಚಂದ್ರಪ್ಪಗೆ ಪೊಲೀಸರ ವಿಚಾರಣೆ ಬಿಸಿ ತಟ್ಟಿದೆ. ಇಂದು ಸಂಜೆ 4 ಗಂಟೆಗೆ ರಾಮಚಂದ್ರಪ್ಪರವರನ್ನು ಮಧುಗಿರಿ ಕೊರ್ಟ್ ಗೆ ಮಧುಗಿರಿ ಪೊಲೀಸರು ಹಾಜರುಪಡಿಸಿದ್ದರು.
ಜನವರಿ 17 ರವರೆಗೆ ರಾಮಚಂದ್ರಪ್ಪಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಾಸಲೀಲೆ ಪ್ರಕರಣದಲ್ಲಿ ಮಧುಗಿರಿ ಡಿವೈಎಸ್ಪಿಗೆ ಸಂಕಷ್ಟಕ್ಕೆ ಸಿಲುಕಿದ್ದು ಸದ್ಯ ಜೈಲುಪಾಲಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx