ರಾಧಿಕಾ ಕುಮಾರಸ್ವಾಮಿ ಅವರ ನಟನೆಯ ಭೈರಾದೇವಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದ್ದು, ಅಕ್ಟೋಬರ್ 3ಕ್ಕೆ ಈ ಸಿನಿಮಾ ತೆರೆ ಕಾಣಲಿದೆ. ನವರಾತ್ರಿಯ ಮೊದಲ ದಿನವೇ ರಾಧಿಕಾ ಕುಮಾರಸ್ವಾಮಿ ನಟಿಸಿರುವ ಈ ಚಿತ್ರ ಪ್ರೇಕ್ಷಕರಿಗೆ ದರ್ಶನ ನೀಡಲಿದೆ.
ಶಮಿಕಾ ಎಂಟರ್‌ಪ್ರೈಸಸ್ ಮೂಲಕ ನಿರ್ಮಾಣವಾಗಿರುವ ಈ ಚಿತ್ರಕ್ಕೆ ರಾಧಿಕಾ ಕುಮಾರಸ್ವಾಮಿ ಅವರು ಇತ್ತೀಚಿಗೆ ಅವರ ನಿವಾಸದ ಬಳಿ ಪ್ರಚಾರದ ಮೊದಲ ಹೆಜ್ಜೆಯಾಗಿ ಟ್ಯಾಬ್ಲೊ ಹಾಗೂ ಆಟೋ ಪ್ರಚಾರಕ್ಕೆ ಚಾಲನೆ ನೀಡಿದರು.
ರಾಧಿಕಾ ಕುಮಾರಸ್ವಾಮಿ ಅವರು ಸ್ವತಃ ತಾವೇ ಆಟೋ ಚಾಲನೆ ಮಾಡಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ನೂರಾರು ಪುರುಷ ಹಾಗೂ ಮಹಿಳಾ ಆಟೋ ಚಾಲಕರು ಉಪಸ್ಥಿತರಿದ್ದರು.
ಶ್ರೀಜೈ ಅವರು ನಿರ್ದೇಶಿಸಿರುವ ಈ ಚಿತ್ರಕ್ಕೆ ರವಿರಾಜ್ ಹಾಗೂ ಯಾದವ್ ಅವರ ಸಹ ನಿರ್ಮಾಣವಿದೆ. ಜೆ.ಎಸ್.ವಾಲಿ ಛಾಯಾಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್ ಸಂಗೀತ ನಿರ್ದೇಶನ ಹಾಗೂ ರವಿಚಂದ್ರನ್ ಅವರ ಸಂಕಲನವಿರುವ ಭೈರಾದೇವಿ ಚಿತ್ರದ ತಾರಾಬಳಗದಲ್ಲಿ ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ರವಿಶಂಕರ್, ರಂಗಾಯಣ ರಘು ಮುಂತಾದವರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q