ತುಮಕೂರು: ಮಾಜಿ ಶಾಸಕರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ.ರಫೀಕ್ ಅಹಮದ್ ರವರಿಗೆ ಅಖಿಲ ಕರ್ನಾಟಕ ಜಮಾತ್ ಎ ಮನ್ಸೂರ್ ನ ಜಿಲ್ಲಾ ಸಂಘಟನಾ ಹಾಗೂ ಅ ಸಂಘಟಿತ ಕಾರ್ಮಿಕರ ವಿಭಾಗದ ಬಶೀರ್ ಅಹ್ಮದ್ ಹಾಗೂ ಪದಾಧಿಕಾರಿಗಳು ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿ ಸನ್ಮಾನಿಸಿದರು.
ಬಶೀರ್ ಅಹಮದ್ ಹಾಗೂ ಕಾರ್ಯದರ್ಶಿ ಸಾಹಿಲ್ ಪಾಷಾ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು. ಬಳಿಕ ತುಮಕೂರು ನಗರದಲ್ಲಿ ಕಾರ್ಮಿಕ ವಿಭಾಗದ ಪದಾಧಿಕಾರಿಗಳಿಗೆ ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್ ರವರು ಪದಾಧಿಕಾರಿಗಳಿಗೆ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ತುಂಬಾ ಹೆಮ್ಮೆಯ ವಿಚಾರವೆಂದು ತಿಳಿಸಿದರು
ಮುಂದಿನ ದಿನಗಳಲ್ಲೂ ಸಹ ಕಾರ್ಮಿಕ ವಿಭಾಗದ ಪದಾಧಿಕಾರಿ ಗಳಿಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಿ ತುಮಕೂರು ವಿಧಾನ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ತಮ್ಮ ಪ್ರೋತ್ಸಾಹ ಸದಾ ಕಾಲ ಇರಬೇಕೆಂದು ಮನವಿ ಮಾಡಿಕೊಂಡರು.
ವರದಿ: ಎ.ಎನ್ . ಪೀರ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5