ತುಮಕೂರು: ಮಾಜಿ ಶಾಸಕರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಡಾ.ರಫೀಕ್ ಅಹಮದ್ ಅವರ ಹುಟ್ಟು ಹಬ್ಬದ ಪ್ರಯುಕ್ತ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಪದಾಧಿಕಾರಿಗಳು ಹುಟ್ಟು ಹಬ್ಬದ ಶುಭಾಶಯ ತಿಳಿಸಿ ಸನ್ಮಾನಿಸಿದರು.
ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿಗಳಾದ ವಿ.ಎಸ್. ಸೈಯದ್ ದಾದಾಪೀರ್ ಅವರು ಈ ವೇಳೆ ಮಾತನಾಡಿ, ಡಾ. ರಫೀಕ್ ಅಹಮದ್ ರವರಿಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ವತಿಯಿಂದ ಹಾಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.
ಶಾಸಕರಾದ ಡಾ.ರಫೀಕ್ ಅಹಮದ್ ರವರು ಪದಾಧಿಕಾರಿಗಳಿಗೆ ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ತುಂಬಾ ಹೆಮ್ಮೆಯ ವಿಚಾರ. ಮುಂದಿನ ದಿನಗಳಲ್ಲೂ ಸಹ ಕಾರ್ಮಿಕ ವಿಭಾಗದ ಪದಾಧಿಕಾರಿಗಳಿಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡಿ ತುಮಕೂರು ವಿಧಾನ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ತಮ್ಮ ಪ್ರೋತ್ಸಾಹ ಸದಾ ಕಾಲ ಪ್ರೋತ್ಸಾಹ ನೀಡಲಿ ಎಂದು ಅವರು ಹಾರೈಸಿದರು.
ಈ ವೇಳೆ, ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಅಬ್ದುಲ್ ರಹೀಂ ಜಿ. ಹಾಗೂ ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಪದಾಧಿಕಾರಿಗಳೆಲ್ಲರೂ ಉಪಸ್ಥಿತರಿದ್ದರು.
ವರದಿ: ಎ.ಎನ್. ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5