ಗುಬ್ಬಿ: ತಾಲ್ಲೂಕಿನ ಬಾನಿಹಟ್ಟಿ ಗ್ರಾಮದಲ್ಲಿ ರಾಗಿ ಕಣದಲ್ಲಿ ಸಂಗ್ರಹಿಸಿದ ರಾಗಿ ಬಣವೆಗೆ ಕೆಲ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಶುಕ್ರವಾರ ಜರುಗಿದೆ.
ಬಾನಿಹಟ್ಟಿ ಗ್ರಾಮದ ರೈತರಾದ ನಾಗಣ್ಣ, ಬಲ್ಲಯ್ಯ, ಶಾರದಮ್ಮ ಎಂಬುವರು, ತಮ್ಮ ಜಮೀನಿನಲ್ಲಿ ಬೆಳೆಯಲಾಗಿದ್ದ ಸುಮಾರು 4 ಟ್ರಾಕ್ಟರ್ ರಾಗಿ ತೆನೆಯನ್ನು, ಕಣ ಮಾಡಲು ಸಂಗ್ರಹಿಸಿದ್ದ ಬಣವೆಗೆ ಬೆಂಕಿ ಹಚ್ಚಿದ್ದಾರೆ ಎಂದು ರೈತರು ಅಳಲನ್ನು ತೋಡಿಕೊಂಡಿದ್ದಾರೆ.
ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಅಗ್ನಿ ನಂದಿಸುವ ಕಾರ್ಯಕ್ಕೆ ಮುಂದಾದರು ಆದರೆ, ಅಷ್ಟರಲ್ಲೇ ಭಾರೀ ಪ್ರಮಾಣದಲ್ಲಿ ಹಾನಿ ನಡೆದಿತ್ತು. ಗ್ರಾಮಸ್ಥರು ಕೊಡ ಗಳಲ್ಲಿ ನೀರು ತಂದು ಬೆಂಕಿ ನಂದಿಸಲು ಸಾಕಷ್ಟು ಪರದಾಟ ನಡೆಸಿದರೂ, ಯಾವುದೇ ಪ್ರಯೋಜನ ವಾಗಲಿಲ್ಲ. ಘಟನೆ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ಘಟನಾ ಸ್ಥಳಕ್ಕೆ ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲೆ ಜಯರಾಂ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿ ಪರಿಹಾರ ನೀಡುವ ಭರವಸೆ ನೀಡಿದ್ದು, ಈ ಮೂರು ಕುಟುಂಬಕ್ಕೆ ಒಂದು ವರ್ಷಕ್ಕೆ ಬೇಕಾಗುವಷ್ಟು ರಾಗಿ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy