ತಿಪಟೂರು: ಸ್ಥಗಿತಗೊಂಡಿರುವ ರಾಗಿ ಖರೀದಿಯ ಪ್ರಕ್ರಿಯೆಯನ್ನು ಪುನರಾರಂಭಿಸುವಂತೆ ಹಾಗೂ ಸಣ್ಣ ಹಿಡುವಳಿದಾರರು ಹಾಗೂ ದೊಡ್ಡ ಹಿಡುವಳಿ ರೈತರು ಬೇಳೆದಿರುವ ರಾಗಿಯನ್ನು ಕೇಂದ್ರ ಸರ್ಕಾರವು ನೋಪೆಡ್ ಮೂಲಕ ಖರೀದಿ ಮಾಡಲು ಭಾರತೀಯ ಕಿಸಾನ್ ಸಂಘದ ತುಮಕೂರು ಜಿಲ್ಲಾ ಸಹಕಾರ್ಯದರ್ಶಿ ಮನೋಹರ್ ರಂಗಾಪುರ ಅವರು ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಸಂಘಟನಾ ಮಂತ್ರಿ ದಿನೇಶ್ ಕುಲಕರ್ಣಿ ಅವರಿಗೆ ನವದೆಹಲಿಯ ಕೇಂದ್ರ ಕಚೇರಿಯಲ್ಲಿ ಮನವಿ ಮಾಡಿದರು.
ಕರ್ನಾಟಕ ರಾಜ್ಯದ ಸುಮಾರು ಹತ್ತರಿಂದ ಹನ್ನೆರಡು ಜಿಲ್ಲೆಯಲ್ಲಿ ರಾಗಿ ಬೆಳೆಯನ್ನು ಬೆಳೆಯುತ್ತಿದ್ದು ಇತ್ತೀಚಿನ ಅತಿವೃಷ್ಟಿಯಿಂದಾಗಿ ಬೆಳೆಯು ನಾಶವಾಗಿದ್ದು ತುಂಬಾ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹಾಗೂ ಈಗ ಖರೀದಿ ಪ್ರಕ್ರಿಯೆ ಮತ್ತು ನೋಂದಾಣಿ ಪ್ರಕ್ರಿಯೆಯನ್ನು ಸ್ಥಗಿತಗೊಂಡಿರುವುದರಿಂದ ರೈತರು ತುಂಬಾ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎಂದು ತಿಳಿಸಲಾಯಿತು . ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಸಂಘಟನಾ ಮಂತ್ರಿ ದಿನೇಶ್ ಕುಲಕರ್ಣಿ ಮಾತನಾಡಿ, ಅತಿ ಶೀಘ್ರದಲ್ಲಿ ಭಾರತ ಸರ್ಕಾರದ ಕೃಷಿ ಮಂತ್ರಾಲಯಕ್ಕೆ ಮನವಿ ಸಲ್ಲಿಸಿ ನೋಂದಣಿ ಪ್ರಕ್ರಿಯೆ ಮತ್ತು ರಾಗಿ ಖರೀದಿಗೆ ಅವಕಾಶ ನೀಡುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಭಾರತೀಯ ಕಿಸಾನ್ ಸಂಘದ ರಾಷ್ಟ್ರೀಯ ಕೋಶಾಧ್ಯಕ್ಷರಾದ ಯುಗಲ್ ಕಿಶೋರ್ ಮಿಶ್ರಾ ಭಾರತೀಯ ಕಿಸಾನ್ ಸಂಘದ ತುಮಕೂರು ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರಶಾಂತ್ ಕರೀಕೆರೆ ಉಪಸ್ಥಿತ ಇದ್ದರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB