ಚಿತ್ರದುರ್ಗ: ಇಂದು ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಉತ್ಸವದಲ್ಲಿ ಭಾಗವಹಿಸುವುದಕ್ಕೂ ಮುನ್ನ ಸಂಸದ ರಾಹುಲ್ ಗಾಂಧಿ, ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ ರಾಹುಲ್ ಗಾಂಧಿ, ಶ್ರೀಗಳ ಆಶೀರ್ವಾದ ಪಡೆದು ಕೊಂಡರು.
ಇದೇ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದಿನ ಪ್ರಧಾನಿಯಾಗುತ್ತಾರೆ ಎಂದು ಹಾವೇರಿ ಹೊಸಮಠದ ಸ್ವಾಮೀಜಿ ಹೇಳುತ್ತಿದ್ದಂತೆ ಮಧ್ಯಪ್ರವೇಶಿಸಿದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು, ಅವರ ಮಾತನ್ನು ಅರ್ಧಕ್ಕೆ ತಡೆದಿದ್ದಾರೆ ಎನ್ನಲಾಗಿದೆ.
ಇನ್ನೂ ಸಿದ್ದರಾಮಯ್ಯಅವರ ನೇತೃತ್ವದಲ್ಲಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆಯನ್ನು ಎದರಿಸೋಣ ಈ ರಾಜ್ಯಕ್ಕೆ ನ್ಯಾಯ ಒದಗಿಸಬೇಕಾದರೆ ಕಾಂಗ್ರೆಸ್ ಪಕ್ಷವನ್ನು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಿಸಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡಲು ನಾವೆಲ್ಲರೂ ಇಂದು ಸಂಕಲ್ಪ ಮಾಡೋಣ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz