ವಯನಾಡ್: ಪ್ರವಾಹ ಪೀಡಿತ ಚೊರಾಲ್ ಮಾಲಾ ಪ್ರದೇಶಕ್ಕೆ ಮಾಜಿ ಸಂಸದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ದು, ಸಂತ್ರಸ್ತರಿಗೆ ಸಾಂತ್ವನ ಹೇಳಿದ್ದಾರೆ.
ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಳಿಕ ರಸ್ತೆ ಮಾರ್ಗವಾಗಿ ವಯನಾಡಿಗೆ ತೆರಳಿದರು.
ಮೆಪ್ಪಡಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಬಳಿಕ ಮೆಪ್ಪಡಿಯಲ್ಲಿನ ಡಾ.ಮೂಫೆನ್ಸ್ ವೈದ್ಯಕೀಯ ಕಾಲೇಜು ಹಾಗೂ ಎರಡು ಪರಿಹಾರ ಶಿಬಿರಗಳಿಗೆ ತೆರಳಿ ಸಂತ್ರಸ್ತ ಸಮಸ್ಯೆಗಳನ್ನು ಆಲಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡ ಸಾಥ್ ನೀಡಿದರು. ರಾಹುಲ್ ಗಾಂಧಿ 2019ರ ಲೋಕಸಭಾ ಚುನಾವಣೆಯಲ್ಲಿ ವಯನಾಡಿನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ, ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದಲ್ಲಿಯೂ ಗೆಲುವು ಸಾಧಿಸಿದ್ದರಿಂದ ಅದನ್ನು ಉಳಿಸಿಕೊಂಡು ವಯನಾಡನ್ನು ಬಿಟ್ಟುಕೊಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296