ಭಾರತ್ ಜೋಡೋ ಯಾತ್ರೆ ನಡುವೆ ದೆಹಲಿಯ ಕೆಂಪು ಕೋಟೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಇದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವಲ್ಲ, ಅಂಬಾನಿ ಮತ್ತು ಅದಾನಿ ಸರ್ಕಾರ” ಎಂದು ಆರೋಪಿಸಿದ್ದಾರೆ.
ಭಾರತವನ್ನು ಒಗ್ಗೂಡಿಸುವುದು ಯಾತ್ರೆಯ ಗುರಿಯಾಗಿದೆ. ನಾವು ಈ ಯಾತ್ರೆಯನ್ನು ಕನ್ಯಾಕುಮಾರಿಯಿಂದ ಪ್ರಾರಂಭಿಸಿದಾಗ, ದ್ವೇಷವನ್ನು ಅಳಿಸಬೇಕು ಎಂದು ನಾವು ಯೋಚಿಸಿದ್ದೆವು. ನಾನು ಇದನ್ನು ಮನಸ್ಸಿನಲ್ಲಿಟ್ಟುಕೊಂಡು ನಡೆದಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಈ ದೇಶದಲ್ಲಿ ದ್ವೇಷ ಎಲ್ಲೆಲ್ಲೂ ಇದೆ. ಆದರೆ ನಾನು ನಡೆಯಲು ಆರಂಭಿಸಿದಾಗ ಸತ್ಯ ದರ್ಶನವಾಯಿತು. 24×7 ಹಿಂದೂ, ಮುಸ್ಲಿಂ ದ್ವೇಷ ಹರಡಲಾಗುತ್ತಿದೆ ಎಂದು ರಾಹುಲ್ ಆತಂಕ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy