ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದು ಮಾಡಿದುಣ್ಣೋ ಮಹರಾಯ ಎಂಬಂತಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದ ಬಿಜೆಪಿ ಯುವ ಸಮಾವೇಶದ ಬಳಿಕ ಮಾತನಾಡಿದ ಅವರು, ಮೋದಿ ಆಡಳಿತವನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿರುವಾಗ ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದು ಸರಿಯಲ್ಲ, ನ್ಯಾಯಾಲಯ ಸರಿಯಾದ ಕ್ರಮ ತೆಗೆದುಕೊಂಡಿದೆ ಎಂದು ಅಭಿಪ್ರಾಯಪಟ್ಟರು.
ಸಿದ್ದರಾಮಯ್ಯ ಅವರ ಕ್ಷೇತ್ರ ಕಗ್ಗಂಟಾಗಿರುವ ಬಗ್ಗೆ ಇದೇ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾಂಗ್ರೆಸ್ ಮುಖಂಡರೇ ಮಾಸ್ಟರ್ ಪ್ಲಾನ್ ಮಾಡಿದ್ದಾರೆ, ಕಾಂಗ್ರೆಸ್ ನ ಒಳಜಗಳದಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಭಿವೃದ್ಧಿಪರ್ವಕ್ಕೆ ಜನಾಶೀರ್ವಾದ ಮಾಡುತ್ತಾರೆ, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


