nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026
    Facebook Twitter Instagram
    ಟ್ರೆಂಡಿಂಗ್
    • ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ
    • ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!
    • ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ರಾಹುಲ್ ಗಾಂಧಿ ಹಣೆದ ತಂತ್ರಕ್ಕೆ ಎಲ್ಲರೂ ಬಬ್ಬೆಬ್ಬೆ’: ಡಿಕೆಶಿ
    ರಾಜ್ಯ ಸುದ್ದಿ September 17, 2022

    ‘ರಾಹುಲ್ ಗಾಂಧಿ ಹಣೆದ ತಂತ್ರಕ್ಕೆ ಎಲ್ಲರೂ ಬಬ್ಬೆಬ್ಬೆ’: ಡಿಕೆಶಿ

    By adminSeptember 17, 2022No Comments2 Mins Read
    rahul gandhi

    ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದಂತ ಕಾರ್ಯಕ್ರಮದ ಭಾಷಣದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಲವೊಂದು ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಕಾರ್ಯಕರ್ತರು ಮತ್ತು ಮುಖಂಡರು ಒಗ್ಗಟ್ಟಾಗಿ ಇರಿ ಎಂದು ಕರೆ ನೀಡಿದ್ದಾರೆ.

    ವಿದ್ಯಾರ್ಥಿ ದಿನಗಳಿಂದ ತಾನು ಬೆಳೆದ ಬಂದ ರೀತಿಯೇ ಎಲ್ಲರಿಗೂ ಮಾದರಿಯಾಗಲಿ ಎಂದ ಡಿಕೆಶಿ, ಪರಿಶ್ರಮಕ್ಕೆ ಫಲ ಇದೆ ಎನ್ನುವುದಕ್ಕೆ ನಾನೇ ಸಾಕ್ಷಿ ಎಂದು ಹೇಳಿದ್ದಾರೆ. ಹುದ್ದೆಗೆ ಆಸೆ ಪಡದೇ ಕೆಲಸ ಮಾಡಿ ಹುದ್ದೆ ನಿಮ್ಮನ್ನೇ ಹುಡುಕಿಕೊಂಡು ಬರುತ್ತದೆ ಎಂದು ಹೇಳಿದ್ದಾರೆ.


    Provided by
    Provided by

    ಭಾರತ್ ಜೋಡೋ ಯಾತ್ರೆಯನ್ನು ಯಶಸ್ವಿಗೊಳಿಸುವುದು ಮತ್ತು ಮುಂದಿನ ಚುನಾವಣೆಗೆ ಪೂರ್ವ ತಯಾರಿ ಸಂಬಂಧ ದೆಹಲಿಯಲ್ಲಿ ರಾಹುಲ್ ಗಾಂಧಿ ಜೊತೆ ನಡೆಸಿದ್ದ ಸಂಭಾಷಣೆಯನ್ನೂ ಡಿಕೆಶಿ ಈ ವೇಳೆ ಬಹಿರಂಗ ಪಡಿಸಿದ್ದಾರೆ.
    ಡಿಕೆಶಿ ಭಾಷಣದ ವೇಳೆ ಭಾರತ್ ಜೋಡೋ ಯಾತ್ರೆಯ ವಿಚಾರದಲ್ಲಿ ಕೆಪಿಸಿಸಿಯ ಕೆಲವು ಮುಖಂಡರ ಜೊತೆಗೆ ಸಹಮತವಿಲ್ಲ ಎನ್ನುವ ವಿಚಾರವೂ ಪರೋಕ್ಷವಾಗಿ ಬಹಿರಂಗಗೊಂಡಿದೆ.

    “ನಾನು ಫೈನಲ್ ಇಯರ್ ಸ್ಟೂಡೆಂಟ್, ವಿದ್ಯಾರ್ಥಿ ನಾಯಕನಾಗಿದ್ದ ದಿವಸದಲ್ಲಿ ನನ್ನ ಮೇಲೆ ನಂಬಿಕೆಯಿಟ್ಟು ಪಕ್ಷ ನನಗೆ ಬಿಫಾರಂ ನೀಡಿತ್ತು. ಅಂದು ದೇವೇಗೌಡ್ರ ಎದುರು ಸ್ಪರ್ಧಿಸಿದ್ದೆ, ಇದೇ ವೀರಪ್ಪ ಮೊಯ್ಲಿಯವರು ನನಗೆ ಟಿಕೆಟ್ ನೀಡಲು ಸಹಕರಿಸಿದ್ದರು. ಅಂದಿನಿಂದ ಇಂದಿನವರೆಗೆ ಪಕ್ಷವನ್ನು ನಾನು ತಾಯಿಯಂತೆ ಪೂಜಿಸುತ್ತೇನೆ. ಪರಿಶ್ರಮಕ್ಕೆ ಫಲವಿದೆ ಎನ್ನುವುದಕ್ಕೆ ನನಗಿಂತ ದೊಡ್ಡ ಉದಾಹರಣೆ ನಿಮಗೆ ಬೇಕಾಗಿಲ್ಲ”ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    ಭಾರತ್ ಜೋಡೋ ಯಾತ್ರೆ ಸಮಿತಿಯ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಡಿಕೆಶಿ,” ನಿಮಗೆ ಪಕ್ಷ ಈಗ ನೀಡಿದ ಸ್ಥಾನ ಸಣ್ಣದಲ್ಲ, ನಿಮ್ಮ ಮೇಲೆ ನಂಬಿಕೆ ಇಟ್ಟು ಪಕ್ಷ ಈ ಜವಾಬ್ದಾರಿ ವಹಿಸಿದೆ. ಈ ಯಾತ್ರೆ ಮತ್ತು ಮುಂದಿನ ಚುನಾವಣೆಗೆ ಸಂಬಂಧಿಸಿದಂತೆ ನಾನು ಮತ್ತು ರಾಜ್ಯದ ಕೆಲವು ನಾಯಕರು ದೆಹಲಿಯಲ್ಲಿ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದೆವು, ಆಗ ಪೂರ್ವ ತಯಾರಿಗೆ ಸಂಬಂಧಿಸಿದಂತೆ ಕೆಲವೊಂದು ವಿಚಾರವನ್ನು ಅವರು ಬಹಿರಂಗ ಪಡಿಸಿದ್ದರು”ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

    “ಸುನೀಲ್ ಅವರ ನೇತೃತ್ವದಲ್ಲಿ ಎಐಸಿಸಿಯ ಟೀಂ ಇದೆ, ಪೊಲಿಟಿಕಲ್ ಅನಾಲಸಿಸ್ ಮಾಡಲು ತಂಡವನ್ನು ರಚಿಸಲಾಗಿದೆ. ನಾನು ಸೇರಿದಂತೆ ಹದಿನಾರು ಜನರು ರಾಹುಲ್ ಅವರನ್ನು ಭೇಟಿಯಾದಾಗ ಈ ವಿಚಾರ ನಮಗೆ ತಿಳಿದು ಬಂದಿದೆ. ಒಟ್ಟು 224 ಅಸೆಂಬ್ಲಿ ಕ್ಷೇತ್ರಗಳಲ್ಲಿ ಆರು ನೂರು ಜನ ನಮ್ಮನಮ್ಮ ಕ್ಷೇತ್ರದಲ್ಲಿದ್ದಾರೆ. ಅವರು ಯಾರೆಂದು ನಿಮಗೆ ಗೊತ್ತಾಗುವುದಿಲ್ಲ, ಅವರೂ ತಮ್ಮನ್ನು ಪರಿಚಯಿಸಿಕೊಳ್ಳುವುದಿಲ್ಲ”ಎಂದು ಡಿಕೆಶಿ ಹೊಸ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.

    “ಆ ತಂಡದ ಸದಸ್ಯರು ನಿಮ್ಮನ್ನೂ ನೋಡುತ್ತಾರೆ, ನನ್ನ ಕಾರ್ಯವೈಖರಿಯನ್ನೂ ನೋಡುತ್ತಿರುತ್ತಾರೆ. ಪ್ರತೀ ಕ್ಷೇತ್ರವನ್ನು ಮ್ಯಾಪಿಂಗ್ ಮಾಡಲಾಗಿದೆ, ಕ್ಷೇತ್ರದ ಹಾಲೀ ಶಾಸಕರು, ಕಳೆದ ಬಾರಿ ಸೋತ ಅಭ್ಯರ್ಥಿ, ಈ ಬಾರಿಯ ಟಿಕೆಟ್ ಆಕಾಂಕ್ಷಿಯ ಕಾರ್ಯವೈಖರಿಯನ್ನು ಅವರು ಅವಲೋಕಿಸುತ್ತಿದ್ದಾರೆ. ಒಂದು ಹಂತದ ವರದಿ ಈಗಾಗಲೇ ರಾಹುಲ್ ಗಾಂಧಿ ಕೈಸೇರಿದೆ. ಕೇರಳದಲ್ಲಿ ಕಳೆದ ಬಾರಿ ಗೆದ್ದಿದ್ದ ಮುಖಂಡರಿಗೆ ಟಿಕೆಟ್ ಕೊಡದೇ ಹದಿಮೂರು ಯುವಕರಿಗೆ ಟಿಕೆಟ್ ನೀಡಲಾಗಿತ್ತು, ಎಲ್ಲರೂ ಬಬ್ಬೆಬ್ಬೆ ಆಗಿ ಹೋದರು”ಎಂದು ಡಿ.ಕೆ.ಶಿವಕುಮಾರ್ ಹೇಳುವ ಮೂಲಕ ಟಿಕೆಟ್ ನೀಡುವ ವಿಚಾರದಲ್ಲಿ ಎಐಸಿಸಿಯ ಕಾರ್ಯತಂತ್ರವೇ ಬೇರೆ ಇರಲಿದೆ ಎನ್ನುವುದನ್ನು ಡಿಕೆಶಿ ಸೂಕ್ಷ್ಮವಾಗಿ ವಿವರಿಸಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯೋಗೀಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿ 17 ಆರೋಪಿಗಳು ದೋಷಿ; ಶಿಕ್ಷೆಯ ಪ್ರಮಾಣ ಇಂದು ಪ್ರಕಟ

    April 16, 2026

    ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ…

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.