nammatumakuru

    Subscribe to Updates

    Get the latest creative news from FooBar about art, design and business.

    What's Hot

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026
    Facebook Twitter Instagram
    ಟ್ರೆಂಡಿಂಗ್
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    ರಾಜ್ಯ ಸುದ್ದಿ August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    By Ganesh TumkuruAugust 10, 2026No Comments2 Mins Read
    food

    ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪಂಚತಾರ ಹಾಗೂ ಐಷಾರಾಮಿ ಹೋಟೆಲ್‌ ಗಳ ಮೇಲೆ ಸಮರ ಸಾರಿದೆ. ಕಾರ್ಯಾಚರಣೆಯ ಮೂರನೇ ದಿನವಾದ ಭಾನುವಾರ ರಾತ್ರಿ ಯುಬಿ ಸಿಟಿ (UB City), ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್‌ ರಸ್ತೆಗಳಲ್ಲಿರುವ ಪ್ರಸಿದ್ಧ ಹೋಟೆಲ್‌ ಗಳ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಒಟ್ಟು 132 ಕೆ.ಜಿ. ಕಳಪೆ ಆಹಾರ ಪದಾರ್ಥಗಳು ಹಾಗೂ 15 ಲೀಟರ್ ಬಳಸಿದ ಅಡುಗೆ ಎಣ್ಣೆಯನ್ನು ವಶಪಡಿಸಿಕೊಂಡಿದ್ದಾರೆ.

    ಸುಮಾರು 15 ಅಧಿಕಾರಿಗಳಿದ್ದ ತಂಡವು ಯುಬಿ ಸಿಟಿಯಲ್ಲಿರುವ ಐದು ಪ್ರಮುಖ ಹೋಟೆಲ್‌ಗಳ ಅಡುಗೆಮನೆಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದೆ.

    ಸ್ಕೈ ಹೋಟೆಲ್ (Sky Hotel):

    ವರದಿಗಳ ಪ್ರಕಾರ, ಇಲ್ಲಿ 45 ಕೆ.ಜಿ. ಕೊಳೆತ ಕೋಳಿ ಹಾಗೂ ದನದ ಮಾಂಸ (ಗೋಮಾಂಸ), 6 ಕೆ.ಜಿ. ವೆಜಿಟೇಬಲ್ ಕಟ್ಲೆಟ್ ಹಾಗೂ 15 ಲೀಟರ್ ಮರುಬಳಕೆಯ ಅಪಾಯಕಾರಿ ಅಡುಗೆ ಎಣ್ಣೆಯನ್ನು ಜಪ್ತಿ ಮಾಡಲಾಗಿದೆ. ಕೊಳೆತ ಮಾಂಸ ಮತ್ತು ಅವಧಿ ಮೀರಿದ ಆಹಾರ ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಹೋಟೆಲ್‌ ನ ಅಡುಗೆಮನೆಗೆ ಬೀಗ ಹಾಕಿ ಸೀಲ್ ಮಾಡಿದ್ದಾರೆ.

    ರಾಯಲ್ ಚೈನ್ ಹೋಟೆಲ್ (Royal Chain):

    ಇಲ್ಲಿ 50 ಕೆ.ಜಿ. ಬಾತುಕೋಳಿ ಮಾಂಸ ಹಾಗೂ 5 ಕೆ.ಜಿ. ಮೀನು ಸೇರಿದಂತೆ ಒಟ್ಟು 55 ಕೆ.ಜಿ. ಅಸಫಲ/ಅಸುರಕ್ಷಿತ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ.

    ಸೆಂಚೆಜ್ ಹೋಟೆಲ್ (Sanchez Hotel):

    ಇಲ್ಲಿ 3 ಕೆ.ಜಿ. ಮೀನು, 7 ಕೆ.ಜಿ. ಕೇಕ್, ಆಲೂಗಡ್ಡೆ ಹಾಗೂ ಇತರ ಕೆಟ್ಟ ಆಹಾರ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ.

    ಮದ್ರಾಸ್ ಕಿಚನ್ ಹಾಗೂ ಟೆಸ್ಕಾನ್ ಹೋಟೆಲ್:

    ಮದ್ರಾಸ್ ಕಿಚನ್‌ ನಲ್ಲಿ 5 ಕೆ.ಜಿ. ಹಸಿ ಬಟಾಣಿ ಹಾಗೂ ಟೆಸ್ಕಾನ್ ಹೋಟೆಲ್‌ ನಲ್ಲಿ 5 ಕೆ.ಜಿ. ಕಳಪೆ ಅಣಬೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ಕಳೆದ ಮೂರು ದಿನಗಳಿಂದ ನಗರದ 3–ಸ್ಟಾರ್ ಹಾಗೂ 5–ಸ್ಟಾರ್ ಹೋಟೆಲ್‌ಗಳಲ್ಲಿ ನಿರಂತರ ತಪಾಸಣೆ ನಡೆಸುತ್ತಿದ್ದು, ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುವ ಹೋಟೆಲ್‌ಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪಂಚತಾರ ಹಾಗೂ ಐಷಾರಾಮಿ ಹೋಟೆಲ್‌ ಗಳ ಮೇಲೆ…

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.