ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ದೇಶದ ನಾನಾ ರಾಜ್ಯಗಳಲ್ಲಿ ಸುರಿಯುತ್ತಿರುವ ಭಾರೀ ಮಳೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜ್ಯದ ಕರಾವಳಿ, ಉತ್ತರ ಒಲನಾಡಿನಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ತ ಆಗಿದೆ.
ಇನ್ನು ನಿನ್ನೆ ಇಡೀ ದಿನ ಬೆಂಗಳೂರು ನಗರದಲ್ಲಿ ಬಿಟ್ಟು ಬಿಟ್ಟು ಮಳೆ ಸುರಿದಿದ್ದು, ಇನ್ನು ಎರಡು ದಿನಗಳ ಕಾಲ ನಗರದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ ವಾತಾವರಣ ಬದಲಾಗಿದೆ. ಕಳೆದ ಎರಡೂರು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ವಾತಾವರಣ ಸಂಪೂರ್ಣವಾಗಿ ಬದಲಾಗಿದೆ.
ಬೆಳ್ಳಂಬೆಳಿಗ್ಗೆ ಹಾಗೂ ರಾತ್ರಿಯ ಸಂದರ್ಭದಲ್ಲಿ ಚಳಿಯ ಪ್ರಮಾಣ ಏರಿಕೆಯಾಗಿದ್ದು, ಇದು ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮುಂದುವರೆಯಲಿದೆ ಎಂಬ ಮಾಹಿತಿ ಇದೆ. ಇನ್ನು ಇಷ್ಟು ದಿನ ಹಾಕದೇ ಸ್ಟೇಟರ್ ಗಳನ್ನು ಜನರ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


