ಬೆಂಗಳೂರು: ಬೆಂಗಳೂರಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಕೇವಲ 24 ಗಂಟೆಗಳಲ್ಲಿ ಬರೊಬ್ಬರಿ 103 ಮಿ.ಮೀ ಮಳೆಯಾಗಿದ್ದು, ಮಳೆಯ ರೌದ್ರಾವತಾರದಿಂದ ಬರೊಬ್ಬರಿ 10 ಕಿ.ಮೀ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ನಡೆದಿದೆ.
ಸೋಮವಾರ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು ನಗರದ ಹಲವು ಭಾಗಗಳು ಜಲಾವೃತ್ತವಾಗಿದ್ದು, ರಸ್ತೆಗಳಲ್ಲಿ ನೀರು ನಿಂತು ಸವಾರರು ಪರದಾಡಿದರು. ಜನ ವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 103 ಮಿಮೀ ಮಳೆಯಾಗಿದೆ. ಮುಂಬರುವ ದಿನಗಳಲ್ಲಿ ನಗರದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ನಗರದ ಹವ್ಯಾಸಿ ಹವಾಮಾನ ವೀಕ್ಷಕರ ಪ್ರಕಾರ, ಬೆಂಗಳೂರಿನಲ್ಲಿ ಈ ಪೂರ್ವ ಮಾನ್ಸೂನ್ ಋತುವಿನಲ್ಲಿ, ಕಳೆದ ಎರಡು ದಿನಗಳಿಂದ 15 ರಿಂದ 20 ಸೆಂ.ಮೀ. ಮಳೆಯಾಗುತ್ತಿದೆ ಎಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW