ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 7ರಂದು ಗದಗ ಜಿಲ್ಲೆ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಮೊದಲ ವರ್ಷಧಾರೆಯಾಗಿದೆ.
ಗದಗ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮೋಡ ಮುಸುಕಿದ ವಾತಾವರಣ ಇದ್ದು, ತಾಲೂಕಿನ ಲಿಂಗದಾಳ ಗ್ರಾಮದಲ್ಲಿ ಸಿಡಿಲು ಸಹಿತ ಮಳೆಯಾಗಿದೆ. ಈ ವೇಳೆ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಇಬ್ಬರು ಯುವಕರಿಗೆ ಸಿಡಿಲು ಬಡಿದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶರಣಪ್ಪ ಪುರದ (20), ದೇವರಾಜ್ ಬಾಡಗಿ (16) ಮೃತಪಟ್ಟವರು.
ಘಟನೆಯಲ್ಲಿ 12 ವರ್ಷದ ಸುನೀಲ್ ಪುರದ ಎಂಬ ಬಾಲಕನಿಗೂ ಗಾಯಗಳಾಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ನಾಲ್ಕು ಕುರಿಗಳು, ಒಂದು ಆಡು ಕೂಡ ಸಾವನ್ನಪ್ಪಿವೆ.
ಸದ್ಯ ಮೃತರಾಗಿರುವ ಶರಣಪ್ಪ ಹಾಗೂ ದೇವರಾಜ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಗದಗ ತಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗನ್ನವರ ಹಾಗೂ ಕಂದಾಯ ನಿರೀಕ್ಷಕ ಜಿ. ಭಜಂತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


