ಬೀದರ್: ಜಿಲ್ಲೆಯ ಔರಾದ್, ಹುಮನಾಬಾದ್, ಭಾಲ್ಕಿ ಸೇರಿದಂತೆ ನಾನಾ ಕಡೆ ಮಂಗಳವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಮಳೆ ಸುರಿಯಿತು.
ಸೋಮವಾರದಿಂದ ಮೋಡ ಕವಿದ ವಾತಾವರಣವಿದ್ದು, ತಣ್ಣನೆಯ ಗಾಳಿ ಬೀಸುತ್ತಿದೆ. ಸೋಮವಾರ ನಸುಕಿನ ಜಾವ ಕೆಲವೆಡೆ ವರ್ಷಧಾರೆ ಆಗಿದೆ. ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಮೋಡ ಕವಿದ ವಾತಾವರಣ ಇತ್ತು. ನಂತರ ಮಳೆಯ ಕಣ್ಣಾಮುಚ್ಚಾಲೆ ಆಡುತ್ತಿದೆ.
ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಭರದಿಂದ ಸಾಗಿದ್ದು, 1.51 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿಯಿದೆ. ಈಗಾಗಲೇ ಕೆಲವೆಡೆ ಶೇ.50ರಷ್ಟು ಬಿತ್ತನೆ ಪೂರ್ಣಗೊಂಡಿದೆ. ಇನ್ನೂ ಕೆಲವೆಡೆ ಸೋಯಾಅವರೆ ರಾಶಿ ಮಾಡುವ ಕಾರ್ಯ ನಡೆಯುತ್ತಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



