ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ, ರಾಯಬಾಗ ಮತ್ತು ಹುಕ್ಕೇರಿ ತಾಲೂಕಿನಲ್ಲಿ ಸಿಡಿಲಬ್ಬರದ ಮಳೆ ಸುರಿದಿದೆ. ರಾಯಬಾಗ ಪಟ್ಟಣದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರಿಗೆ ಸಿಡಿಲು ಬಡಿದಿದೆ. ಇದರಿಂದ ಒಬ್ಬ ಮಹಿಳೆ ಮೃತಪಟ್ಟಿದ್ದು ನಾಲ್ವರ ಸ್ಥಿತಿ ಗಂಭೀರವಾಗಿದೆ.
ಇನ್ನು, ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲೂ ಕುರಿಮೇಯಿಸಲು ಹೋಗಿದ್ದವರಿಗೆ ಸಿಡಿಲು ಹೊಡೆದಿದೆ. ಈ ಘಟನೆಯಲ್ಲಿ ಒಬ್ಬ ಮೃತಪಟ್ಟಿದ್ರೆ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. 12 ಕುರಿಗಳು ಕೂಡ ಸಾವನ್ನಪ್ಪಿವೆ ಎನ್ನಲಾಗಿದೆ.
ಕಾಡಾಪುರ ಗ್ರಾಮದಲ್ಲಿ ಸಿಡಿಲು ಬಡಿದು ಆಲೆಮನೆ ಧ್ವಂಸವಾಗಿದೆ. ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಮರ ಬಿದ್ದು ಆಕಳು ಸಾವನ್ನಪ್ಪಿದೆ. ಬಾಗಲಕೋಟೆಯಲ್ಲೂ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಗೆ ಅಲ್ಲೋಲ ಕಲ್ಲೋಲವೇ ಉಂಟಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


