ತುಮಕೂರು: ತುಮಕೂರಿನಲ್ಲಿ ಮೊದಲ ಮಳೆಗೆ ಅವಾಂತರ ಸೃಷ್ಟಿಯಾದ ಘಟನೆ ನಡೆದಿದೆ. ತುಮಕೂರಿನ ಔಟರ್ ರಿಂಗ್ ರೋಡ್ ನಲ್ಲಿ ಮಳೆ ನೀರಿನಿಂದ ಸಂಚಾರಕ್ಕೆ ಅಡಚಣೆ ಉಂಟಾಯಿತು.
ನಗರದ ಹಲವೆಡೆ ಅಂಡರ್ ಪಾಸ್ ಗಳು, ರಸ್ತೆಗಳು ಜಲಾವೃತವಾಗಿದ್ದು ವಾಹನ ಸವಾರರು ಪರದಾಡುವಂತಾಯಿತು. ಮಳೆಯ ನೀರು ರಸ್ತೆಯಲ್ಲಿ ನಿಂತ ಪರಿಣಾಮ ಬ್ರಿಡ್ಜ್ ಕೆಳಗೆ ಸಂಚರಿಸಲು ವಾಹನ ಸವಾರರು ಪರದಾಡಿದರು.
ಪ್ರತಿ ಬಾರಿ ಮಳೆ ಬಂದಾಗಲೂ ಈ ಸಮಸ್ಯೆ ಎದುರಾಗುತ್ತಿದೆ ಎಂದು ಸಾರ್ವಜನಿಕರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬ್ರಿಡ್ಜ್ ಕೆಳಗೆ ಸಂಚರಿಸುವ ಸಂದರ್ಭದಲ್ಲಿ ಮಳೆನೀರಿನಲ್ಲಿ ಸಿಲುಕಿ ಕೆಟ್ಟು ನಿಂತ ಘಟನೆಯೂ ನಡೆಯಿತು.
ನೀರಿನಲ್ಲಿ ವಾಹನಗಳನ್ನು ಚಲಾಯಿಸಲು ವಾಹನ ಸವಾರರ ಪರದಾಡಿದರು. ಪಾಲಿಕೆಯ ಹಾಗೂ ರೈಲ್ವೆ ಇಲಾಖೆಯ ವಿರುದ್ಧ ಸಿಡಿದೆದ್ದ ಸಾರ್ವಜನಿಕರು ಹಿಡಿಶಾಪ ಹಾಕಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4