ತಿಪಟೂರು: ತಾಲೂಕಿನ ಕರಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಸಹಕಾರ ಸಂಘಗಳು ರೈತರ ಪರ ಕಾಳಜಿ ಹೊಂದಿದ್ದು, ಎಲ್ಲಾ ರೈತರಿಗೆ ಸವಲತ್ತುಗಳನ್ನು ಒದಗಿಸಿಕೊಟ್ಟಾಗ ಮಾತ್ರ ರೈತರ ಅಭಿವೃದ್ಧಿ ಸಾಧ್ಯ ಎಂದರು.
ಇಂತಹ ಕಾರ್ಯಕ್ರಮವನ್ನು ನಮ್ಮ ತಾಲೂಕಿನ ಕರಡಿ ಸಹಕಾರ ಸಂಘ ನಡೆಸುತ್ತಿದ್ದು ಇದರ ಸದುಪಯೋಗವನ್ನು ರೈತರು ಬಳಸಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ತಿಳಿಸಿದರು ಮತ್ತು ಇದೇ ಸಂದರ್ಭದಲ್ಲಿ ಸಚಿವರು 2022 ನೇ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೆ.ಆರ್. ದೇವರಾಜು ಮಾತನಾಡಿ, ಸಚಿವರಾದ ಬಿ.ಸಿ. ನಾಗೇಶ್ ಅವರು ತಾಲೂಕಿನ ಉತ್ತಮ ನಾಯಕರಾಗಿದ್ದು, ಇವರ ನಾಯಕತ್ವದಲ್ಲಿ ಕೆಲಸ ಮಾಡಿದಾಗ ತಾಲೂಕಿನ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕೃಷಿ ಮಾರುಕಟ್ಟೆ ಅಧ್ಯಕ್ಷ ದಿವಾಕರ್, ಜಿಲ್ಲಾ ಬಿಜೆಪಿ ಮುಖಂಡ ಲೋಕೇಶ್ ಗೌಡ, ಪ್ರಗತಿಪರ ರೈತರಾದ ಸದಾಶಿವಯ್ಯ ಸೇರಿದಂತೆ ಪ್ರಮುಖ ಮುಖಂಡರುಗಳು ಹಾಜರಿದ್ದರು
ವರದಿ: ಮಂಜು ಗುರುಗದಹಳ್ಳಿ
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700