nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    • ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
    • ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
    • ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ
    • ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ–ಮನೆಗೆ ಭೇಟಿ ನೀಡುವ ಗಣತಿದಾರರಿಗೆ ಸಹಕರಿಸಲು ಮನವಿ
    • ಬೀದರ್‌: ರಾಡ್‌ನಿಂದ ಮಾರಣಾಂತಿಕ ಹಲ್ಲೆಗೈದು ಪತ್ನಿಯನ್ನು ಕೊಂದ ಪತಿ
    • ಬೀದರ್‌ | ಹೆದ್ದಾರಿಯಲ್ಲಿ ಬೈಕ್‌ ಗೆ ಕಾರು ಡಿಕ್ಕಿ: ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ‌, ಓರ್ವ ಗಂಭೀರ ಗಾಯ
    • ವೈದ್ಯರು – ಸಮಾಜದ ಜೀವನಾಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅರಣ್ಯಾಧಿಕಾರಿ ಧರೆಗುರುಳಿಸಿದ ಗಿಡಗಳನ್ನು ತಾಲೂಕು ಕಚೇರಿ ಮುಂದೆ ಸುರಿದು ರೈತರಿಂದ ಪ್ರತಿಭಟನೆ
    ಗುಬ್ಬಿ March 7, 2022

    ಅರಣ್ಯಾಧಿಕಾರಿ ಧರೆಗುರುಳಿಸಿದ ಗಿಡಗಳನ್ನು ತಾಲೂಕು ಕಚೇರಿ ಮುಂದೆ ಸುರಿದು ರೈತರಿಂದ ಪ್ರತಿಭಟನೆ

    By adminMarch 7, 2022No Comments2 Mins Read
    protest

    ಗುಬ್ಬಿ: ತಾಲ್ಲೂಕಿನ ಅಮ್ಮನಘಟ್ಟ ಅರಣ್ಯ ಪ್ರದೇಶದ ಗಡಿ ನಿರ್ಧರಿಸಲು ಮುಂದಾದ ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ನೇತೃತ್ವದ ತಂಡ ಏಕಾಏಕಿ ರೈತರ ಕೃಷಿ ಜಮೀನಿಗೆ ಅತಿಕ್ರಮಣ ಮಾಡಿದ್ದಲ್ಲದೇ, ರೈತರ ವಿರುದ್ಧ ದೌರ್ಜನ್ಯದ ಮಾತುಗಳಾಡಿದ್ದಾರೆ. ಫಲ ನೀಡುತ್ತಿದ್ದ 30 ವರ್ಷದ ಅಡಕೆ, ತೆಂಗು ಮತ್ತು ಎಳೆ ಅಂಬು ಮಣ್ಣು ಪಾಲು ಮಾಡಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಸಂಜೆ ಸಿಟ್ಟಿಗೆದ್ದ ರೈತ ಸಂಘದ ಸದಸ್ಯರು ಹಾಗೂ ಸಂತ್ರಸ್ತ ರೈತರು ತಾಲ್ಲೂಕು ಕಛೇರಿ ಮುಂದೆ ಅನಿರ್ಧಿಷ್ಟಾವಧಿ ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ.

    ಮರಗಿಡಗಳನ್ನು ಬೆಳೆಸಿ ಪೋಷಿಸುವ ಕಾಯಕ ಮಾಡುವ ಅರಣ್ಯ ಇಲಾಖೆ ಕೃಷಿಕನ ಜಮೀನಿಗೆ ಹಿಟಾಜಿ ಯಂತ್ರ ನುಗ್ಗಿಸಿ ಫಲ ನೀಡುತ್ತಿದ್ದ  200ಕ್ಕೂ ಅಧಿಕ ಅಡಕೆ ಮರಗಳು, 10 ತೆಂಗಿನಮರಗಳು ಹಾಗೂ ವಿಳೇದೆಲೆ ಅಂಬುಗಳನ್ನು ಕತ್ತರಿಸಿ ಕಟುಕತನ ಪ್ರದರ್ಶಿಸಿದ್ದಾರೆ. ನಮ್ಮ ಜಮೀನಿನ ಬೆಳೆ ನಾಶ ಮಾಡದಂತೆ ಅಂಗಲಾಚಿದರೂ ಕಿಂಚಿತ್ತೂ ಕರುಣೆ ತೋರದ ವಲಯ ಅರಣ್ಯಾಧಿಕಾರಿ ದುಗ್ಗಪ್ಪ ಅವರು ರೈತರಿಗೆ ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ. ಮುಗ್ದ ರೈತ ಕುಟುಂಬಕ್ಕೆ ದಿಕ್ಕು ತೋಚದೆ ತಲೆ ಮೇಲೆ ಕೈ ಹಿಟ್ಟುಕೊಂಡು ರೋಧಿಸುತ್ತಿದ್ದು, ಇಡೀ ರಾತ್ರಿ ನಿದ್ದೆಗೆಟ್ಟ ಕುಟುಂಬದ ಅರಣ್ಯ ರೋಧನೆ ಅಳಿಸುವವರಿಲ್ಲದೇ ಕಂಗಾಲಾದರು. ಸಂಜೆ ವೇಳೆ ವಿಷಯ ತಿಳಿದ ರೈತ ಸಂಘದ ಸದಸ್ಯರು ಸ್ಥಳಕ್ಕೆ ಧಾವಿಸಿ ಅಲ್ಲಿನ ಅಮಾನವೀಯ ಕೃತ್ಯ ನೋಡಿ ಆಕ್ರೋಶ ಹೊರಹಾಕಿದರು. ಅಲ್ಲಿ ಮಣ್ಣು ಪಾಲಾದ ಎಲ್ಲಾ ಮರಗಳನ್ನು ಟ್ರ್ಯಾಕ್ಟರ್ ಮೂಲಕ ತಾಲ್ಲೂಕು ಕಚೇರಿ ಮುಂದೆ ಸುರಿದು  ಉಗ್ರ ಪ್ರತಿಭಟನೆ ಆರಂಭಿಸಿದರು. ಅರಣ್ಯ ಇಲಾಖೆ ವಿರುದ್ಧ ಘೋಷಣೆ ಕೂಗಿದರು. ಅಧಿಕಾರಿ ದುಗ್ಗಪ್ಪ ಅಮಾನತಿಗೆ ಆಗ್ರಹಿಸಿ ಧರಣಿ ನಡೆಸಿದರು.

    ಸರ್ವೆ ನಂಬರ್ 116 ರಲ್ಲಿನ 401 ಎಕರೆ ಅರಣ್ಯ ಪ್ರದೇಶದ ಗಡಿ ನಿರ್ಣಯ ಮಾಡಿದ್ದ ಇಲಾಖೆ ಸರ್ವೆ ಮೂಲಕ ಗಡಿ ಕಲ್ಲುಗಳನ್ನು ನೆಟ್ಟಿದ್ದಾರೆ. ಭಾನುವಾರವೇ ಟ್ರಂಚ್ ಆರಂಭಿಸಿದ ದುಗ್ಗಪ್ಪ ಅವರ ತಂಡ ಗಡಿ ಕಲ್ಲು ಬಿಟ್ಟು ಏಕಾಏಕಿ ಸಂತ್ರಸ್ತ ರೈತರಾದ ಪುಟ್ಟತಾಯಮ್ಮ ದೊಡ್ಡತಿಮ್ಮಯ್ಯ ಅವರ ಜಮೀನಿಗೆ ಅತಿಕ್ರಮಣ ಮಾಡಿ ಅಡಕೆ, ತೆಂಗಿನಮರ ಧರೆಗುರುಳಿಸಿದ್ದು ರಾಕ್ಷಸ ಕೃತ್ಯ ಎಂದು  ರೈತಸಂಘದ ತಾಲ್ಲೂಕು ಅಧಕ್ಷ ಕೆ.ಎನ್.ವೆಂಕಟೇಗೌಡ ಕಿಡಿಕಾರಿದರು.

    ಕಾನೂನು ಹೋರಾಟಕ್ಕೆ ಸಹ ಸಮಯ ನೀಡದ ಅಧಿಕಾರಿಗಳು ರಜೆ ದಿನ ತೆರವು ಕಾರ್ಯ ಮಾಡಿದ್ದು ಸರಿಯಲ್ಲ. ಸಂತ್ರಸ್ತ ಕುಟುಂಬದ ವಕೀಲ ಶ್ರೀನಿವಾಸ್ ಅಧಿಕಾರಿಗಳ ಬಳಿ ಮನವಿ ಮಾಡಿದರೂ ಯಾವುದೇ ಬೆಲೆ ನೀಡದೆ ನಮ್ಮ ಪ್ರದೇಶವೆಂದು ಕೂಗಾಡಿದ್ದಾರೆ. ಈ ಜೊತೆಗೆ ಸರ್ವೆ ಕಲ್ಲು ತಪ್ಪಾಗಿದ್ದರೆ ಮತ್ತೊಮ್ಮೆ ಸರ್ವೆ ನಡೆಸಬೇಕಿತ್ತು. ಕಾನೂನು ಕೈಗೆ ತೆಗೆದುಕೊಂಡು ಗಿಡ ಮರಗಳನ್ನು ಕಡಿದಿದ್ದು ಸರಿಯಲ್ಲ. ಈ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದರು.

    ಧರಣಿಗೆ ಬೆಂಬಲ ಸೂಚಿಸಿದ ಜೆಡಿಎಸ್ ಮುಖಂಡ ಬಿ.ಎಸ್.ನಾಗರಾಜು ಮಾತನಾಡಿ, ಅನುಚಿತವಾಗಿ ವರ್ತಿಸಿದ ಅರಣ್ಯ ಇಲಾಖೆ ಕಾನೂನು ರೀತಿ ಕ್ರಮ ವಹಿಸದೆ ದುರುದ್ದೇಶದಲ್ಲಿ ರೈತರಿಗೆ ತೊಂದರೆ ನೀಡಿದೆ. ಅರಣ್ಯ ಪ್ರದೇಶದ ಬದಿಯಲ್ಲಿ ಅವರ ಜಮೀನಲ್ಲಿ ಕಳೆದ 30 ವರ್ಷದಿಂದ ಕೃಷಿ ನಂಬಿ ಬದುಕು ಸಾಗಿಸುತ್ತಿದೆ. ಈ ರೀತಿ ಅತಿಕ್ರಮಣ ಮಾಡಿದ ಇಲಾಖೆ ಫಲ ನೀಡುವ ಮರಗಳನ್ನು ಧರೆಗುರುಳಿಸಿದ್ದು ಸರಿಯಲ್ಲ. ತಪ್ಪಿತಸ್ಥ ಅಧಿಕಾರಿಯನ್ನು ಅಮಮಾತುಗೊಳಿಸಲು ಆಗ್ರಹಿಸಿದರು.

    ಸ್ಥಳಕ್ಕೆ ಧಾವಿಸಿದ ತಹಸೀಲ್ದಾರ್ ಬಿ.ಆರತಿ ಪ್ರತಿಭಟನಾಕಾರರೊಂದಿಗೆ ಚರ್ಚಿಸಿ  ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರತಿಭಟನೆ ನಿಲ್ಲಿಸಲು ಒಪ್ಪದ ರೈತರು ಅಹೋರಾತ್ರಿ ಧರಣಿ ನಡೆಸಲು ನಿರ್ಧರಿಸಿ ಅಮಾನತು ಶಿಕ್ಷೆ ಕೊಡುವಂತೆ ಆಗ್ರಹಿಸಿದರು.

    ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್, ಗ್ರಾಪಂ ಸದಸ್ಯ ರಮೇಶ್, ರೈತಸಂಘದ ಸಿ.ಜಿ.ಲೋಕೇಶ್, ಗುರುಚನ್ನಬಸಪ್ಪ, ಮುಖಂಡರಾದ ಮಹಾದೇವಯ್ಯ, ವಿನಯ್, ಸಂತೋಷ್ ಸೇರಿದಂತೆ ಅಮ್ಮನಘಟ್ಟ ಗ್ರಾಮಸ್ಥರು ಇದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್

    July 1, 2026

    ತಿಪಟೂರು: ವ್ಯಸನಮುಕ್ತ ಸಮಾಜದ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್…

    ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ

    July 1, 2026

    ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ

    July 1, 2026

    ಕೊರಟಗೆರೆಯಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಆರಂಭ ; ಜು.29ರವರೆಗೆ ಮನೆ-ಮನೆ ಭೇಟಿ

    July 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.