ಬೆಳಗಾವಿ: ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ಸುವರ್ಣ ಸೌಧ ಮುಂದೆ ರೈತರು ಅರೆಬೆತ್ತಲೆ ಪ್ರತಿಭಟನೆ ಮುಂದಾಗಿದ್ದರು. ಆದರೆ ಜಿಲ್ಲೆಯ ಹತ್ತರಗಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರೈತರನ್ನು ಪೊಲೀಸರು ತಡೆ ಹಿಡಿದರು. ಇದರಿಂದ ಪೊಲೀಸರ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿದ್ದಾರೆ. ರಸ್ತೆ ತಡೆ ಬಳಿಕ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಹತ್ತರಗಿ ಟೋಲ್ ಗೇಟ್ ಬಳಿ ಪೊಲೀಸರು ರೈತರನ್ನು ತಡೆದಿದ್ದಾರೆ.
ಪ್ರತಿಭಟನೆಗೆ ತಡೆಯೊಡ್ಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿ, ಸ್ಥಳದಲ್ಲೇ ಧರಣಿ ಕುಳಿತಿದ್ದ ಅವರನ್ನು ವಶಕ್ಕೆ ಪಡೆದಿದ್ದಾರೆ.
ಪರಿಸ್ಥಿತಿ ಕೈಮೀರುತ್ತಿದ್ದಂತೆ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಧರಣಿ ನಿರತರ ನಡುವೆ ವಾಗ್ವಾದ ನಡೆದು, ನೂಕಾಟ, ತಳ್ಳಾಟ ನಡೆಯಿತ್ತು. ಈ ವೇಳೆ ಹಲವು ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


