ಪಾವಗಡ: 3 ಕೃಷಿ ಕಾಯ್ದೆಗಳನ್ನು ಹಿಂಪಡೆದು, ರೈತರು ಪ್ರತಿಭಟನೆ ಕೈಬಿಟ್ಟ ಹಿನ್ನಲೆಯಲ್ಲಿ ರೈತ ಸಂಘ, ಪ್ರಗತಿಪರ ಸಂಘಟನೆ ಪದಾಧಿಕಾರಿಗಳು ಶನಿವಾರ ಪಟ್ಟಣದ ಅಂಬೇಡ್ಕರ್ ವಿಗ್ರಹಕ್ಕೆ ಮಾಲಾರ್ಪಣೆ ಮಾಡಿ ವಿಜಯೋತ್ಸವ ಆಚರಿಸಿದವು.
ಈ ವೇಳೆ ಮಾತನಾಡಿದ ಪ್ರಗತಿಪರ ವೇದಿಕೆ ಮುಖಂಡ ರಾಮಾಂಜಿನಪ್ಪ, ಕೇಂದ್ರ ಸರ್ಕಾರ ರೈತರ ಮೇಲೆ ಬಲವಂತವಾಗಿ ಹೇರಲು ಹೊರಟಿದ್ದ ಕೃಷಿ ಕಾಯ್ದೆ ಹಿಂಪಡೆದಿರುವುದು ರೈತರ ಹೋರಾಟಕ್ಕೆ ಸಿಕ್ಕ ಜಯ ಎಂದರು.
ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಮಾತನಾಢಿ, ವರ್ಷದಿಂದ ದೆಹಲಿಯಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡು, ಸುಮಾರು 700 ರೈತರು ಬಲಿದಾನ ಮಾಡಿದ್ದಾರೆ. ಇವರ ತ್ಯಾಗದ ಫಲವಾಗಿ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಹಿಂಪಡೆದಿದೆ. ವಿಶ್ವದ ಹಸಿವು ತಣಿಸುವ ರೈತರ ಬಗ್ಗೆ ಸರ್ಕಾರಗಳು ತಾತ್ಸಾರ ಮಾಡಬಾರದು ಎಂದರು.
ಈ ಸಂದರ್ಭದಲ್ಲಿ ಮುಖಂಡ ಕೃಷ್ಣಮೂರ್ತಿ, ಮಂಜುನಾಥ್, ಸತ್ಯಲೋಕೇಶ್, ನೇರಳೆಕುಂಟೆ ನಾಗೇಂದ್ರ ಕುಮಾರ್ ಅಭಿಮಾನಿ ಬಳಗದ ಕಿರಣ್ ಮಾತನಾಡಿದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700