nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ

    September 28, 2026
    Facebook Twitter Instagram
    ಟ್ರೆಂಡಿಂಗ್
    • ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
    • ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
    • ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
    • ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
    • ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    • ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ
    • ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರ ಮನೆ ಬಾಗಿಲಿಗೆ ತೆರಳಿ ಕಷ್ಟ ಸುಖದಲ್ಲಿ ಭಾಗಿಯಾಗಿದ್ದೇನೆ | ಶಾಸಕ ಮಸಾಲೆ ಜಯರಾಮ್
    ಗುಬ್ಬಿ March 5, 2022

    ರೈತರ ಮನೆ ಬಾಗಿಲಿಗೆ ತೆರಳಿ ಕಷ್ಟ ಸುಖದಲ್ಲಿ ಭಾಗಿಯಾಗಿದ್ದೇನೆ | ಶಾಸಕ ಮಸಾಲೆ ಜಯರಾಮ್

    By adminMarch 5, 2022No Comments2 Mins Read
    masale jayaram

    ಗುಬ್ಬಿ: ನಾನು ಶಾಸಕನಾಗಿ ಅಧಿಕಾರವಹಿಸಿಕೊಂಡ ನಂತರ ರೈತರ ಮನೆ ಬಾಗಿಲಿಗೆ ತೆರಳಿ ಅವರ ಕಷ್ಟ ಸುಖದಲ್ಲಿ ಭಾಗಿಯಾಗಿ ಜನಸೇವಕನಾಗಿ ಕೆಲಸಮಾಡಿದ್ದೇನೆ ಎಂದು ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ತಿಳಿಸಿದರು.
    ಸಿ.ಎಸ್.ಪುರ ಹೋಬಳಿಯಲ್ಲಿ ಸುಮಾರು 4 ಕೋಟಿ ವೆಚ್ಚದಲ್ಲಿ ಹಲವು ಗ್ರಾಮಗಳ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಸಿ.ಎಸ್. ಪುರ ದಲ್ಲಿರುವ ನಮ್ಮ ದೇವಸ್ಥಾನದ ಆವರಣದಲ್ಲಿ ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸುಮಾರು ವರ್ಷಗಳಿಂದ ಸಿ.ಎಸ್. ಪುರ ಕೆರೆಯು ತುಂಬದೇ ಇದ್ದು, ಈ ಬಾರಿ ಕೆರೆ ತುಂಬಿ ಹರಿದಿತ್ತು, ಈ ಕೆರೆಯ ನೀರನ್ನು ಮಿತವಾಗಿ ಬಳಸುವ ಸಲುವಾಗಿ ಸಿಎಸ್ ಪುರ ಹೋಬಳಿ ರೈತರನ್ನು ಒಂದೆಡೆ ಸೇರಿಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ನೀರನ್ನು ಬಳಕೆ ಮಾಡಿಕೊಳ್ಳುವ ಬಗ್ಗೆ ರೈತರೊಂದಿಗೆ ಚರ್ಚಿಸಲು ಈ ಸಭೆಯನ್ನು ಕರೆಯಲಾಗಿತ್ತು ಎಂದರು.

    ವಿದ್ಯುಚ್ಛಕ್ತಿ ಸಮಸ್ಯೆ ಹೆಚ್ಚಾಗಲು ರಾಯಚೂರು ತರ್ಮಲ್ ಕೇಂದ್ರದಲ್ಲಿ ತೊಂದರೆಯಾಗಿದ್ದು, ಸಮಸ್ಯೆ ಈಗಾಗಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಬಗೆಹರಿಸಿದ್ದು ಇನ್ನುಮುಂದೆ ಯಾವುದೇ ರೀತಿಯ ತೊಂದರೆಯಾಗದಂತೆ ಐದು ಗಂಟೆಗಳ ಕಾಲ ರೈತರಿಗೆ ವಿದ್ಯುತ್ ನೀಡುವ ಬಗ್ಗೆ ವಿಧಾನಸಭೆಯ ಚರ್ಚಿಸಲಾಗಿದೆ. ಸುಮಾರು 319 ಕೋಟಿ ರೂಗಳ ವೆಚ್ಚದಲ್ಲಿ ತಿಪಟೂರು ತುರುವೇಕೆರೆ ಚಿಕ್ಕನಾಯಕನಹಳ್ಳಿ ಮೂರು ತಾಲೂಕುಗಳನ್ನು ಪ್ರಕಾರ ವಿದ್ಯುತ್ ಪರಿವರ್ತಕ ಗಳನ್ನು ನೀಡಲಾಗುತ್ತದೆ. ಯಾವುದೇ ರೈತರು ಇನ್ನು ಮುಂದೆ ವಿದ್ಯುತ್ ಪರಿವರ್ತಕ ಸುಟ್ಟ 24 ಗಂಟೆಯ ಅವಧಿಯಲ್ಲಿ ವಿದ್ಯುತ್ ಪರಿವರ್ತಕ ಅಳವಡಿಸಲಾಗುತ್ತದೆ ಎಂದು ತಿಳಿಸಿದರು.

    ಹೇಮಾವತಿ ಮುಖ್ಯ ನಾಲೆಯಿಂದ ಸಿ.ಎಸ್. ಪುರ ಕೆರೆಗೆ ನೇರವಾಗಿ ನೀರನ್ನು ಹರಿಸಲು ನಬಾರ್ಡ್ ಹಾಗೂ ರಾಜ್ಯ ಸರ್ಕಾರದಿಂದ 38 ಕೋಟಿ ಅಂದಾಜು ಪಟ್ಟಿಯನ್ನು ಈಗಾಗಲೇ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಇನ್ನು ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗುವುದರಿಂದ ಸಿಎಸ್ ಪುರ ಹೋಬಳಿ ಮೂಲ ಕೆರೆಗಳಿಗೆ ಯಾವುದೇ ಅಡ್ಡಿ ಆತಂಕವಿಲ್ಲದೆ ನೇರವಾಗಿ ಹೇಮಾವತಿ ನೀರು ಹರಿದು ಬರುತ್ತದೆ ಎಂದು ತಿಳಿಸಿದರು.

    ನನ್ನ ಕ್ಷೇತ್ರದಲ್ಲಿ ಯಾವುದೇ ಕಾಮಗಾರಿ ಗಳು ಉಳಿದಿರುವುದಿಲ್ಲ ಇನ್ನು ಕೇವಲ ಶೇಕಡ ಐದರಷ್ಟು ಸಿಸಿ ರಸ್ತೆಗಳು ಬಾಕಿ ಉಳಿದಿದ್ದು ಆ ಕಾಮಗಾರಿಗಳನ್ನು ಮುಗಿಸುತ್ತೇನೆ ಎಂದು ತಿಳಿಸಿದ ಅವರು ಶಾಸಕ ನೆಂಬ ಅಂಬು ನನಗಿಲ್ಲ ಪ್ರತಿಯೊಬ್ಬ ಮತದಾರನ ಮನೆಗಳ ಕಷ್ಟ-ಸುಖಗಳಿಗೆ ಇದೇ ರೀತಿ ಸ್ಪಂದಿಸುತ್ತೇನೆ ಎಂದು ತಿಳಿಸಿದರು. ಈ ಬಾರಿಯ ಬಿಜೆಪಿ ಸರ್ಕಾರದಲ್ಲಿ ರೈತಪರ ಬಜೆಟ್ಟನ್ನು ನೀಡಲಾಗಿದು ತುಮಕೂರು ಜಿಲ್ಲೆಗೆ ವೈದ್ಯಕೀಯ ಕಾಲೇಜು ಸಹ ಮಂಜೂರಾಗಿದ್ದು ಎಲ್ಲಾ ಮೂಲಗಳಿಂದಲೂ ಜನಪದ ಬಜೆಟನ್ನು ನೀಡಿದ್ದಾರೆ ಎಂದು ಸಮರ್ಥನೆ ಮಾಡಿಕೊಂಡರು.

    ಈ ಸಂದರ್ಭದಲ್ಲಿ ಸಿ.ಎಸ್. ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಪರಾಜು ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಭಾನು ಪ್ರಕಾಶ್ ಗ್ರಾಮ ಪಂಚಾಯಿತಿ ಸದಸ್ಯರಾದ ಯದು ಕುಮಾರ್ ಕಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ ಎಲ್ ರವಿಕುಮಾರ್ ಮುಖಂಡರಾದ ಎಸ್ಎಲ್ಎನ್ ಮದುವೆಮನೆ ಬಸವರಾಜು ಸದಾಶಿವ ಚನ್ನಿಗಪ್ಪ ನಂಜುಂಡಯ್ಯ ಅಪ್ಪಣ್ಣಗೌಡ ಇತರ ಮುಖಂಡರು ಹಾಗೂ ಸಿಎಸ್ ಪುರ ಗ್ರಾಮಸ್ಥರು ಸುತ್ತಮುತ್ತ ರೈತಬಾಂಧವರು ಈ ಸಭೆಯಲ್ಲಿ ಭಾಗವಹಿಸಿದರು.

    ವರದಿ: ಮಂಜುನಾಥ, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನ ಹೊಳೆ ನೀರು: ಸಚಿವ ಚಲುವರಾಯ ಸ್ವಾಮಿ

    September 18, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಬೆಂಗಳೂರು: ರಾಜ್ಯದಲ್ಲಿ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಆರ್ಥಿಕತೆಯ ಮೇಲೆ ವ್ಯಾಪಕ ಒತ್ತಡವಿರುವುದನ್ನು ಉಪಮುಖ್ಯಮಂತ್ರಿ ಜಿ. ಪರಮೇಶ್ವರ…

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ

    September 28, 2026

    ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!

    September 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.