nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರಿಗೆ ಆಸರೆಯಾಗುವ ಯೋಜನೆ ಜಾರಿಯಾಗಲಿ : ಜಿ.ವಿ.ವೀರೇಂದ್ರ ಪ್ರಸಾದ್
    ಕೊರಟಗೆರೆ February 7, 2022

    ರೈತರಿಗೆ ಆಸರೆಯಾಗುವ ಯೋಜನೆ ಜಾರಿಯಾಗಲಿ : ಜಿ.ವಿ.ವೀರೇಂದ್ರ ಪ್ರಸಾದ್

    By adminFebruary 7, 2022No Comments2 Mins Read
    athma nirbhara

    ಕೊರಟಗೆರೆ:  ಮಳೆಯನ್ನೇ ನಂಬಿ ಬದುಕು ಸಾಗಿಸುತ್ತಿರುವ ರೈತನಿಗೆ ಆಗಾಗ ಮಳೆ ಕೈಕೊಟ್ಟು ರೈತನನ್ನು ಸಂಕಷ್ಟಕ್ಕೆ ದೂಡುತ್ತಿದ್ದು, ಸರ್ಕಾರಗಳು ರೈತರಿಗೆ ಆಸರೆಯಾಗಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿ ಆರ್ಥಿಕವಾಗಿ ಮುಂದೆ ಬರಲು ಸಹಕಾರಿಯಾಗಬೇಕೆಂದು ವಡ್ಡಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಸಂತರಾಜು ಸಲಹೆ ನೀಡಿದರು.

    ಕೊರಟಗೆರೆ ತಾಲ್ಲೂಕು ಗರುಗದೊಡ್ಡಿ ಗ್ರಾಮದಲ್ಲಿ ನೆಹರು ಯುವಕೇಂದ್ರ ತುಮಕೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ಮತ್ತು ವಲಯ ಸಂಶೋಧನಾ ಕೇಂದ್ರ ಮಂಡ್ಯ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಆತ್ಮನಿರ್ಭರ್ ಭಾರತ ಯೋಜನೆಯ ಕುರಿತು ಯುವಜನರಿಗೆ ಕಾರ್ಯಾಗಾರ ಹಾಗೂ ರೈತ ಫಲಾನುಭವಿಗಳಿಗೆ ಟಾರ್ಪಲ್ ವಿತರಣೆ , ಯುವಕ ಮತ್ತು ಯುವತಿ ಮಂಡಳಿಗಳಿಗೆ ಕ್ರೀಡಾ ಸಾಮಾಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ರೈತರು ಸದಾಕಾಲ ಶ್ರಮಜೀವಿಗಳು ಆದರೆ ಮಳೆರಾಯ ರೈತರೊಂದಿಗೆ ಜೂಜಾಟವಾಡುತ್ತಿದ್ದಾನೆ. ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ಹತಾಶನಾಗುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ಕೃಷಿ ಇಲಾಖೆ ರೈತರ ಸಂಕಷ್ಟವನ್ನು ದೂರ ಮಾಡಲು ಅಗತ್ಯ ಸಲಹೆ ಮತ್ತು ಮಾಹಿತಿಗಳನ್ನು ನೀಡುವುದರ ಜೊತೆಗೆ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದರು. ತಾಲ್ಲೂಕಿನ ಕೃಷಿ ಅಧಿಕಾರಿಗಳು ಹಾಗೂ ಸಿಬ್ಬಂದಿ ರೈತರಿಗೆ ಸ್ಪಂಧಿಸಿ ಉತ್ತಮವಾದ ಕಾರ್ಯ ಮಾಡುತ್ತಿದ್ದಾರೆ ಎಂದು ಕೃಷಿ ಇಲಾಖೆಯ ಕಾರ್ಯವೈಖರಿಯನ್ನು ಶ್ಲಾಘಿಸಿದರು.

    ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಡ್ಯ ವಿ.ಸಿ.ಫಾರಂನ ಮುಸುಕಿನ ಜೋಳ ಸಂಶೋಧಕರು ಹಾಗೂ ಮುಖ್ಯಸ್ಥರಾದ ಡಾ.ಮಹದೇವಯ್ಯ, ಮುಸುಕಿನ ಜೋಳ ಬೆಳೆಯುವ ರೈತರು ಒಟ್ಟಿಗೆ ಒಂದು ಸಂಘವನ್ನು ರಚಿಸಿ ನಮ್ಮ ವಲಯ ಕಚೇರಿಯಿಂದ ಸಿಗುವ ಸೌಲಭ್ಯಗಳನ್ನು ಪಡೆಯಿರಿ ಎಂದು ಹೇಳಿ ರೈತರಿಗೆ ಉಚಿತವಾಗಿ ಟಾರ್ಪೆಲ್‌ಗಳನ್ನು ವಿತರಿಸಿದರು.

    ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹೆಚ್.ನಾಗರಾಜು ಮಾತನಾಡಿ ಸದಾಕಾಲ ನಾವು ರೈತರ ಸೇವೆ ಸಿದ್ಧರಿರುತ್ತೇವೆ. ರೈತರು ನಮ್ಮ ಇಲಾಖೆಯಲ್ಲಿ ಸಿಗುವ ಸೌಲಭ್ಯ ಹಾಗೂ ಆಧುನಿಕ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಳ್ಳಿ ಎಂದು ಕರೆ ನೀಡಿದರು.

    ಎಸ್‌ ಬಿಐ ವ್ಯವಸ್ಥಾಪಕ ಜಯಪ್ರಕಾಶ್ ಮಾತನಾಡಿ, ಆತ್ಮನಿರ್ಭರ ಭಾರತ್ ಯೋಜನೆಯು ಬಡವರು, ಕಾರ್ಮಿಕರು ಮತ್ತು ಸಂಘಟಿತ ಮತ್ತು ಅಸಂಘಟಿತ ವಲಯಗಳಿಂದ ವಲಸಿಗರನ್ನು ಸಬಲೀಕರಣಗೊಳಿಸುವುದೇ ಮುಖ್ಯ ಉದ್ಧೇಶವಾಗಿದೆ ಎಂದರು.

    ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳು ಹಾಗೂ ರೈತರು, ಬಡವರು, ಕಾರ್ಮಿಕರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮುಂದುವರಿಯಲು ಹಲವಾರು ಸೌಲಭ್ಯಗಳಾದ ಕಿಸಾನ್ ಕ್ರೆಡಿಟ್ ಕಾರ್ಡ್, ಮುದ್ರಾಯೋಜನೆ, ಬೀದಿ ಬದಿ ವ್ಯಾಪಾರಿಗಳಿಗೆ ಸಿಗುವ ಸಾಲಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಸುಧಾಕರ್ ಮಾತನಾಡಿ, ದೇಶದಲ್ಲಿ ಯುವ ಸಬಲೀಕರಣ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯೋನ್ಮುಖರಾಗಿರುವುದಲ್ಲಿ ರಾಜ್ಯ ಸರ್ಕಾರವೂ ಸಹ ಒಂದಾಗಿದೆ. ಇಂದು ಆತ್ಮನಿರ್ಭರ್ ಭಾರತ್ ಯೋಜನೆಯಡಿಯಲ್ಲಿ ಯುವಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳ ಬಗ್ಗೆ ಮಾಹಿತಿ ನೀಡುತ್ತಿರುವ ಯುವ ಸಬಲೀಕರಣ ಹಾಗೂ ನೆಹರು ಯುವಕೇಂದ್ರದ ಕಾರ್ಯ ಶ್ಲಾಘನೀಯ ಎಂದರು.

    ಇದೇ ಸಂದರ್ಭದಲ್ಲಿ ಪ್ರಗತಿಪರ ರೈತ ಚಕ್ಕರಂಗಯ್ಯ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿ ಅಧಿಕಾರಿಗಳಾದ ರುಕ್ಮಿಣಿ, ಸಂಧ್ಯಾ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಗೌರವಾಧ್ಯಕ್ಷ ಹಾಗೂ ರಾಷ್ಟ್ರ ಯುವ ಪ್ರಶಸ್ತಿ ವಿಜೇತ ಜಿ.ವಿ.ವೀರೇಂದ್ರಪ್ರಸಾದ್, ಗ್ರಾಮ ಪಂಚಾಯಿತಿ ಸದಸ್ಯ ರಂಗನಾಥ್, ನಿವೃತ್ತ ಕೃಷಿ ಅಧಿಕಾರಿ ಜಿ.ವಿ.ಹನುಮಂತರಾಯ, ಯುವ ಮುಖಂಡರಾದ ಜಿ.ವಿ.ನಾಗೇಂದ್ರಕುಮಾರ್, ಜಿ.ಬಿ.ಶಿವಸ್ವಾಮಿ, ಜಿ.ಟಿ.ವೆಂಕಟೇಶ್ವರ, ಎನ್.ರಾಜಣ್ಣ, ಜಿ.ವಿ.ತಿಮ್ಮಯ್ಯ ಮುಂತಾದವರು ಭಾಗವಹಿಸಿದ್ದರು.

    ವರದಿ : ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ

    February 22, 2026

    ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವರ್ಗೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 1, 2024ರ ಸರ್ವೋಚ್ಚ ನ್ಯಾಯಾಲಯದ ಐತಿಹಾಸಿಕ ತೀರ್ಪಿನ ಆಧಾರದ…

    ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು

    February 22, 2026

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.