ತಿಪಟೂರು: ತಮಿಳುನಾಡು ಮೂಲದ ಪುಲ್ಲರ್ ಟೆನ್ ಇಂಡಿಯಾ ಗ್ರಾಮಶಕ್ತಿ ಮೈಕ್ರೋ ಫೈನಾನ್ಸ್ ಕಂಪನಿಯವರು ಸಂಘದ ಸದಸ್ಯರಿಗೆ ಲಕ್ಷಾಂತರ ರೂಪಾಯಿ ಪಂಗನಾಮ ಹಾಕಿರುವ ಘಟನೆ ತಿಪಟೂರು ನಗರದ ಕಂಚಘಟ್ಟ ಗ್ರಾಮದಲ್ಲಿ ನಡೆದಿದೆ.
ಗ್ರಾಮಶಕ್ತಿ ಹೆಸರಿನಲ್ಲಿ ರೈತರಿಗೆ ಮತ್ತು ಬಡ ಕುಟುಂಬಗಳಿಗೆ ಸಾಲ ಕೊಟ್ಟು ಕಂತುಗಳ ಮುಖಾಂತರ ಸಾಲ ವಸೂಲಿ ಮಾಡುವ ನೆಪದಲ್ಲಿ ಹಲವು ಸದಸ್ಯರ ಹಣವನ್ನು ಗುಳುಂ ಮಾಡಲಾಗಿದೆ ಎನ್ನುವ ಆರೋಪಗಳು ಕೇಳಿ ಬಂದಿವೆ.
ಗ್ರಾಮಶಕ್ತಿ ಕ್ರೆಡಿಟ್ ಕಂಪನಿ ಲಿಮಿಟೆಡ್ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಮ್ಯಾನೇಜರ್ ನಮಗೆ ನ್ಯಾಯ ಕೊಡಿ ಎಂದು ಸದಸ್ಯರು ಕೇಳಿಕೊಂಡರೆ ಉಡಾಫೆ ಉತ್ತರ ಕೊಟ್ಟು ಕಳಿಸುತ್ತಿದ್ದಾರೆ ಎಂದು ಸಾರ್ವಜನಿಕರು ಮತ್ತು ಸದಸ್ಯರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ದಯಮಾಡಿ ಸಂಬಂಧಪಟ್ಟಂತ ಅಧಿಕಾರಿಗಳು ಇತ್ತ ಗಮನಹರಿಸಿ ನ್ಯಾಯ ಒದಗಿಸಿ ಕೊಡಬೇಕೆಂದು ಸದಸ್ಯರು ಮತ್ತು ಸಾರ್ವಜನಿಕರು ಮನವಿ ಮಾಡಿದ್ದಾರೆ.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz