ಪಾವಗಡ: ಪಟ್ಟಣದ ಹಿಂದೂಪುರ ರಸ್ತೆಯ ಬಳಿ ಬೆಟ್ಟದಿಂದ ಮಳೆಯ ನೀರು ಸರಾಗವಾಗಿ ಹರಿಯುವಂತೆ ಇದ್ದ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟುಗಳನ್ನು ನಿರ್ಮಾಣ ಮಾಡಲು ಮುಂದಾದರೂ, ಪಾವಗಡ ಪುರಸಭೆಯ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ಪಕ್ಷದ ಒಬಿಸಿ ಮೊರ್ಚಾದ ರಾಜ್ಯಕಾರ್ಯಕಾರಿಣಿ ಸಮಿತಿಯ ಸದಸ್ಯರ ರವಿ ಆರೋಪಿಸಿದ್ದಾರೆ.
ಪಾವಗಡ ಪಟ್ಟಣದ ಪ್ರವೇಶಿಸಲು ಇರುವ ಪ್ರಮುಖ ರಸ್ತೆಗಳಲ್ಲಿ ಹಿಂದೂಪುರ ರಸ್ಥೆಯು ಒಂದು ಪ್ರಮುಖ ರಸ್ತೆಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿಯುವಂತೆ ಅಗತ್ಯ ಕ್ರಮಗಳನ್ನು ಪುರಸಭೆಯ ಅಧಿಕಾರಿಗಳು ತೆಗೆದುಕೊಳ್ಳಬೇಕು, ನಂತರ ಕಟ್ಟಡ ನಿರ್ಮಾಣಕ್ಕೆ ಪರವಾನಗಿ ನೀಡಿದ ಬಳಿಕ ಒಮ್ಮೆಯೂ ಪರಿಶೀಲನೆ ನಡೆಸುವುದಿಲ್ಲ, ಭ್ರಷ್ಟಾಚಾರಕ್ಕೆ ದಾಸರಾಗಿದ್ದಾರೆ ಎಂದು ಗಂಭೀರವಾಗಿ ಅಧಿಕಾರಿಗಳು ವಿರುದ್ಧ ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296