ಮಾಜಿ ಸಿಎಂ ಎಸ್.ಎಂ. ಕೃಷ್ಣ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದು, ವಯೋ ಸಹಜ ಕಾರಣಗಳಿಂದಾಗಿ ರಾಜಕೀಯದಲ್ಲಿ ಸಕ್ರಿಯವಾಗಿ ಇರಲು ಸಾಧ್ಯವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೆ ತಿಂಗಳುಗಳು ಬಾಕಿ ಉಳಿದಿರುವಂತೆಯೇ ಮಾಜಿ ಸಿಎಂ, ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದು, ನನಗೆ ಪ್ರಸ್ತುತ 90 ವರ್ಷ ವಯಸ್ಸಾಗಿದೆ. ವಯೋ ಸಹಜ ಕಾರಣಗಳಿಂದಾಗಿ ರಾಜಕೀಯದಲ್ಲಿ ಸಕ್ರಿಯವಾಗಿ ಇರಲು ಸಾಧ್ಯವಾಗುವುದಿಲ್ಲ.
ಹೀಗಾಗಿ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆ ವಿಚಾರವಾಗಿ ಕೇಳಿದಾಗ ಪ್ರತಿಕ್ರಿಯಿಸಿ ಅವರು, ಪಕ್ಷದ ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಅದರಲ್ಲಿ ಭಾಗಿಯಾಗುವ ಸಂದರ್ಭ ಬಂದಲ್ಲಿ ಆಗ ನೋಡೋಣ. ವರಿಷ್ಠರೇನಾದರೂ ಸಲಹೆಗಳನ್ನು ಕೇಳಿದಲ್ಲಿ ಖಂಡಿತವಾಗಿಯೂ ಅನುಭವದ ಮೇರೆಗೆ ಅದನ್ನು ಹಂಚಿಕೊಳ್ಳಬಲ್ಲೆ ಎಂದು ತಿಳಿಸಿದರು.
ಪಕ್ಷದಲ್ಲಿ ನಿಮ್ಮನ್ನು ಕಡೆಗಣಿಸಲಾಗುತ್ತಿದೆಯೇ ಎಂಬ ಬಗ್ಗೆ ಸುದ್ದಿಗಾರರು ಕೇಳಿದಾಗ, ನಾನೇ ರಾಜಕೀಯದಿಂದ ನಿವೃತ್ತಿಯಾಗುತ್ತಿರುವಾಗ ಕಡೆಗಣಿಸುವ ಮಾತೆಲ್ಲಿಂದ ಬಂತು ಎಂದು ಅವರು ಪ್ರತಿಕ್ರಿಯಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


