ಶಿವಮೊಗ್ಗ: ನನ್ನ ಅವಧಿಯಲ್ಲಿ ಹಣ ಪಡೆದು ಇಲಾಖೆಗಳ ಎನ್ ಒಸಿ ಕೊಟ್ಟಿದ್ದೇನೆ ಎಂದು ಸಾಬೀತಾದರೆ ರಾಜಕೀಯ ನಿವೃತ್ತಿ ಘೊಷಿಸುತ್ತೇನೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲೆಸೆದರು.
ಇಲ್ಲಿನ ಸವಳಂಗ ರಸ್ತೆಯಲ್ಲಿರುವ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ವಿಧಾನಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಅಮಾತನಾಡಿದ ಅವರು, ಶೇ.40ರಷ್ಟು ಪರ್ಸೆಂಟೇಜ್ ನೀಡಿದರೆ ಮಾತ್ರ ಹಣ ಬಿಡುಗಡೆ ಆಗಲಿದೆ ಎಂದು ನಾನು ಆರೋಪಿಸಿಲ್ಲ. ಇದನ್ನು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪಿಸಿ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಸಣ್ಣ ನೀರಾವರಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ದಿ ಪಿಡಬ್ಲೂಡಿ, ಎಲ್ಲಾ ಇಲಾಖೆಯಲ್ಲಿ ಪರ್ಸೆಂಟೇಜ್ ನೀಡಿದರೆ ಮಾತ್ರ ಕೆಲಸ ಆಗಲಿದೆ. ಬಿಜೆಪಿ ಸರ್ಕಾರದಲ್ಲಿ ಶೇ. 40ರಷ್ಟು ಹಣ ನೀಡಿದರೆ ಇನ್ನೆಲ್ಲಿ ಗುಣಮಟ್ಟದ ಕಾಮಗಾರಿ ನಿರೀಕ್ಷಿಸಲು ಸಾಧ್ಯವಾಗುತ್ತದೆ ಎಂದು ಅವರು ಪ್ರಶ್ನಿಸಿದರು.
ಈ ತರಹ ಯಾವ ಕಾಲದಲ್ಲಿಯೂ ನಡೆದಿರಲಿಲ್ಲ. 12 ವರ್ಷ ಹಣಕಾಸು ಮಂತ್ರಿ ಆಗಿ ಕೆಲಸ ಮಾಡಿದ್ದೇನೆ. ಎಲ್ಲಾ ಇಲಾಖೆಯಲ್ಲಿ ಎನ್ ಒಸಿ ನೀಡಿದ್ದೀನಿ. ನಾನು ಹಣ ತೆಗೆದುಕೊಂಡಿರುವುದಾಗಿ ಒಬ್ಬ ಸಾಬೀತು ಪಡಿಸಿದರೆ ನಾನು ರಾಜಕೀಯ ಸನ್ಯಾಸತ್ವ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಎಸೆದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700