nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ: ಹಾಡಿ ಹೊಗಳಿದ ಸಿದ್ದರಾಮಯ್ಯ
    ತುಮಕೂರು June 22, 2025

    ರಾಜಣ್ಣ ರಾಜಕೀಯ ಮತ್ತು ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ: ಹಾಡಿ ಹೊಗಳಿದ ಸಿದ್ದರಾಮಯ್ಯ

    By adminJune 22, 2025No Comments3 Mins Read
    siddaramaiah

    ತುಮಕೂರು: ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಬೇಧವಿಲ್ಲದೇ ಬಡ ಮಕ್ಕಳ  ಶಾಲಾ ಶಿಕ್ಷಣಕ್ಕೆ ರಾಜಣ್ಣ ನೆರವು ನೀಡುತ್ತಾ ಬಂದಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ತಿಳಿಸಿದರು.

    ಅವರು ಶನಿವಾರ ಕೆ.ಎನ್ ರಾಜಣ್ಣ ಅವರ 75 ನೇ ಜನ್ಮ ದಿನಾಚರಣೆ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡಿದರು.


    Provided by
    Provided by

    ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಅಸಮಾನತೆಯನ್ನು ತೊಲಗಿಸಿ ಎಲ್ಲರೂ ಮುಖ್ಯ ವಾಹಿನಿಗೆ ತರಬೇಕು ಎನ್ನುವುದೇ ನಿಜವಾದ ರಾಜಕೀಯ ಗುರಿ.  ಸಂವಿಧಾನ ಕೂಡ ಇದನ್ನೇ ಹೇಳುತ್ತದೆ. ಮನುಷ್ಯತ್ವ ಎನ್ನುವುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಅದು ಇದ್ದಾಗ ಮಾತ್ರ ಸಮಸಮಾಜ, ಬದಲಾವಣೆ ತರಲು ಸಾಧ್ಯವಾಗುತ್ತದೆ. ಇದಾಗಬೇಕಾದರೆ ಪ್ರತಿಯೊಬ್ಬರಿಗೂ ಆರ್ಥಿಕ ಹಾಗೂ ಸಮಾಜಿಕ ಶಕ್ತಿಯನ್ನು ತುಂಬಬೇಕು. ದೇಶಕ್ಕೆ ಸಿಕ್ಕಿರುವ ಸ್ವಾತಂತ್ರ್ಯ ಸಾರ್ಥಕವಾಗಬೇಕಾದರೆ ಎಲ್ಲರೂ ಸ್ವಾವಂಬಿಗಳಾಗಬೇಕು ಎಂದು  ಅಂಬೇಡ್ಕರ್ ಹೇಳಿದ್ದಾರೆ.  ವೈರುಧ್ಯತೆ ಇರುವ ಸಮಾಜದಲ್ಲಿ ಸಮಾನ ಅವಕಾಶಗಳನ್ನು ನೀಡಿ  ಸಮಸಮಾಜ ನಿರ್ಮಾಣವಾಗದೇ ಹೋದರೆ ಪ್ರಜಾಪ್ರಭುತ್ವದ ಸೌಧವನ್ನು ಜನರೇ ಧ್ವಂಸ ಮಾಡುತ್ತಾರೆ ಎಂದೂ ಕೂಡ ಹೇಳಿದ್ದರು ಎಂದರು.

    ಸಾಲ ಮನ್ನಾ ಕಾರ್ಯಕ್ರಮದ ಶ್ರೇಯಸ್ಸು ರಾಜಣ್ಣನವರಿಗೆ ಸಲ್ಲಬೇಕು:

    ರೈತರು ಸಾಲ ಮನ್ನಾ ಮಾಡಬೇಕೆಂದು ಒತ್ತಡ ತಂದಿದ್ದ ಸಂದರ್ಭದಲ್ಲಿ 50,000 ರೂ.ಗಳ ವರೆಗೆ ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕುಗಳಲ್ಲಿ ರೈತರ ಸಾಲದ  ಸಂಪೂರ್ಣ ವಿವರಗಳನ್ನು ನೀಡಿದವರು ರಾಜಣ್ಣ. ಅವರಿಲ್ಲದೇ ಹೋಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದರು.

    ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅವಧಿಯಲ್ಲಿ  ಸಾಲ ಮನ್ನಾ ಮಾಡಿದ್ದರ ಪೈಕಿ 300 ಕೋಟಿಗಳು ಬಾಕಿಯಿದ್ದು, ರೈತರ ಕಾರ್ಯಕ್ರಮವಾಗಿರುವುದರಿಂದ ಇದನ್ನು ಮುಂದಿನ ದಿನಗಳಲ್ಲಿ ಚುಕ್ತಾ ಮಾಡಲಾಗುವುದು ಎಂದು ತಿಳಿಸಿದರು.  ಇದರ ಶ್ರೇಯ ರಾಜಣ್ಣನವರಿಗೆ ಸೇರಬೇಕಾಗಿದ್ದರೂ ಕುಮಾರಸ್ವಾಮಿಯವರು ಪಡೆದರು.  ರಾಜಣ್ಣ ನೇರ ನಡೆ ನುಡಿಯವರು, ನಿಸ್ಪೃಹವಾಗಿ ಮಾತನಾಡುವವರು. ಈ ಗುಣಗಳು ಸ್ವಾಭಿಮಾನದ ಸಂಕೇತ. ಸ್ವಾಭಿಮಾನವಿದ್ದವರು ಮೇಲೆ ಬರುತ್ತಾರೆ ಎಂದರು.

    ಬದ್ಧತೆಯಿರುವ ವಿಚಾರಗಳನ್ನು  ಯಾವುದೇ ಕಾರಣಕ್ಕೂ ಮರೆಯಬಾರದು:

    ದಲಿತರು ವಿದ್ಯಾವಂತರು, ಶ್ರೀಮಂತರಾದರೂ ಅವರನ್ನು ಏಕವಚನದಲ್ಲಿಯೇ ಮಾತನಾಡಿಸುತ್ತೇವೆ. ಇದು ದಾಸ್ಯದ ಸಂಕೇತ. ಮೀಸಲು ಕ್ಷೇತ್ರದಲ್ಲಿ ರಾಜಣ್ಣ ಸ್ಪರ್ಧೆ ಮಾಡದೇ ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ರಾಜಕೀಯದಲ್ಲಿ ಸೋಲು ಗೆಲವು ಸಾಮಾನ್ಯ.  ನಾನೂ ಕೂಡ ನಾಲ್ಕು ಬಾರಿ  ಸೋತು,  ಒಂಭತ್ತು ಬಾರಿ ಗೆದ್ದಿದ್ದೇನೆ. ಸೋತರೂ ಗೆದ್ದರೂ ಬದ್ಧತೆಯಿರುವ ವಿಚಾರಗಳಲ್ಲಿ ಯಾವುದೇ ಕಾರಣಕ್ಕೂ ಮರೆಯದೇ, ವಿಚಲಿತರಾಗಬಾರದು. ಇದನ್ನು ಮಾಡಿದರೆ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ಅಭಿಪ್ರಾಯಪಟ್ಟರು.  ಹುಟ್ಟು ಸಾವಿನ ನಡುವೆ ಬದುಕಿನ ಸಾರ್ಥಕಗೊಳಿಸಿಕೊಳ್ಳಬೇಕು. ಹುಟ್ಟಿದ ಮೇಲೆ ನನ್ನ ಜೀವನ ಸಾರ್ಥಕವಾಗಿದೆಯೇ ಎಂದು ಹಿಂದಿರುಗಿ ನೋಡಬೇಕು. ನಿಮಗೆ ನಿಮ್ಮ ಬದುಕು ಸಮಾಧಾನ ತಂದು ಕೊಡುವಂತಿರಬೇಕು.  ರಾಜಣ್ಣ ನವರದ್ದು ಸಾರ್ಥಕ ಬದುಕು ಎಂದರು.

    ಎಲ್ಲರಿಗೂ ಸಮಾನ ಅವಕಾಶಗಳು ದೊರೆಯಬೇಕು:

    ಹಣೆಬರಹ,  ಕರ್ಮ ಸಿದ್ದಾಂತಗಳನ್ನು ಬಸವಾದಿ ಶರಣರು ತ್ಯಜಿಸಿದ್ದರು.  ದೇವರು ಯಾರ ನಡುವೆಯೂ ತಾರತಮ್ಯ ಮಾಡುವುದಿಲ್ಲ.  ಮೇಲು ಕೀಳು ಎಂಬುದಿಲ್ಲ.  ಹುಟ್ಟಿನಿಂದ ಯಾರೂ ದಡ್ಡರೂ ಅಲ್ಲ, ಮೇಧಾವಿಗಳೂ ಅಲ್ಲ. ಅವಕಾಶಗಳು ಸಿಗಬೇಕು ಎಂದರು. ರಾಜಣ್ಣ ಅವರು ದಲಿತ ಜನಾಂಗದಲ್ಲಿ ಹುಟ್ಟಿ ಸಮರ್ಥ ಸಹಕಾರಿಯಾವುದು ಸುಲಭವಲ್ಲ.  ಸಂವಿಧಾನ ಇರದೇ ಹೋಗಿದ್ದರೆ ನಾವ್ಯಾರೂ ಮುಖ್ಯವಾಹಿನಿಗೆ ಬರಲು ಸಾಧ್ಯವಿರಲಿಲ್ಲ ಎಂದ ಮುಖ್ಯಮಂತ್ರಿಗಳು,  ನಮ್ಮ ಸರ್ಕಾರ ಬಂದ ನಂತರ ಸಮಾಜದಲ್ಲಿ ಬಡತನ ತೊಡೆದುಹಾಕಲು  ಸಾಮಾಜಿಕ, ಆರ್ಥಿಕ ಶಕ್ತಿಯನ್ನು ತುಂಬುವ ಪ್ರಯತ್ನವನ್ನು ಮಾಡಿದ್ದೇವೆ ಎಂದರು.

    ಜನರಲ್ಲಿ ಆರ್ಥಿಕ ಶಕ್ತಿ ತುಂಬಿದ ಗ್ಯಾರಂಟಿ ಯೋಜನೆಗಳು:

    ಗ್ಯಾರಂಟಿ ಯೋಜನೆಗಳು ಎಲ್ಲ ಜಾತಿ ಧರ್ಮದವರಿಗೆ ಒದಗಿಸಲಾಗಿದೆ. 1.64 ಕೋಟಿ ಜನರಿಗೆ ಗೃಹಜ್ಯೋತಿ, 1.22 ಕೋಟಿ ಜನರಿಗೆ ಗೃಹಲಕ್ಷ್ಮೀ, ಎಲ್ಲ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ, ಅನ್ನ ಭಾಗ್ಯ ಹಾಗೂ ಯುವನಿಧಿ ಯೋಜನೆಗಳು ಜನರನ್ನು ತಲುಪಿದೆ ಎಂದರು.

    ಇದೇ ಸಂದರ್ಭದಲ್ಲಿ ರಾಜಣ್ಣ ಅವರಿಗೆ ಜನ್ಮ ದಿನದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಗಳು ನೂರು ವರ್ಷಗಳಿಗೂ ಹೆಚ್ಚು ಕಾಲ  ಬಾಳಲಿ ಎಂದು ಹಾರೈಸಿದರು.  ಸಚಿವರಾದ ಜಿ. ಪರಮೇಶ್ವರ್, ಸಾಹಿತಿ ಬರಗೂರು ರಾಮಚಂದ್ರಪ್ಪ, ಕೆ.ಎನ್.ರಾಜಣ್ಣ ಅವರ ಕುಟುಂಬ ವರ್ಗ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ…

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.