ನವದೆಹಲಿ : ರಾಜೀವ್ ಗಾಂಧಿ ಹಂತಕರ ಆರು ಜನರ ಬಿಡುಗಡೆ ಮಾಡುವಂತೆ ನವೆಂಬರ್ 11ರಂದು ಹೊರಡಿಸಿದ್ದ ಆದೇಶವನ್ನ ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರು ಅಪರಾಧಿಗಳಿಗೆ ವಿನಾಯಿತಿ ನೀಡುವ ನವೆಂಬರ್ 11ರ ಆದೇಶವನ್ನ ಮರುಪರಿಶೀಲಿಸುವಂತೆ ಕೋರಿ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.
ಈ ಪ್ರಕರಣವನ್ನ ವಾದಿಸಲು ತನಗೆ ಅವಕಾಶ ಸಿಗಲಿಲ್ಲ ಮತ್ತು ಸುಪ್ರೀಂ ಕೋರ್ಟ್ ಆದೇಶವು ಕಾನೂನಾತ್ಮಕವಾಗಿ ದೋಷಪೂರಿತವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.ಇತ್ತಿಚಿಗೆ ಆರು ಜನ ರಾಜೀವ್ ಗಾಂಧಿ ಹಂತಕರು ಜೈಲಿನಿಂದ ಬಿಡುಗಡೆಯಾಗಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz