ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ಹೀಗಾಗಿ ಇದೀಗ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ದಿಢೀರ್ ಬುಲಾವ್ ನೀಡಿದೆ.
ದೆಹಲಿಗೆ ಬರುವಂತೆ ಸೂಚನೆ ಬಂದಿದ್ದು, ನಾಳೆ ತೆರಳಲಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರಚಾರ ಸಮಿತಿಯ ಅಧ್ಯಕ್ಷ ಎಂ ಬಿ ಪಾಟೀಲ್, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಸಲೀಂ ಅಹಮ್ಮದ್, ಈಶ್ವರ್ ಖಂಡ್ರೆ, ರಾಮಲಿಂಗಾ ರೆಡ್ಡಿ, ಧ್ರುವ ನಾರಾಯಣ್ ಮತ್ತಿತರರು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಚುನಾವಣೆಗೆ ರಣತಂತ್ರ ರೂಪಿಸುವ ಕುರಿತು ರಾಜ್ಯ ನಾಯಕರ ಜತೆ ಮಹತ್ವದ ಮಾತುಕತೆ ನಡೆಸಲಿರುವ ಹೈಕಮಾಂಡ್, ಅಭ್ಯರ್ಥಿಗಳ ಆಯ್ಕೆ ವಿಚಾರ, ಪಕ್ಷ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳನ್ನು ಚರ್ಚಿಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy